ಹಾವೇರಿ: ಕೆರೆಗೆ ಬಿದ್ದ ಪರಿಣಾಮ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ನಡೆದಿದೆ
ಮೃತನನ್ನು ಉಲ್ಲಾಸ್(21) ಎಂದು ಗುರುತಿಸಲಾಗಿದ್ದು, ಈತ ಹಾವೇರಿಯ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಾಲ್ಕನೇ ಸೆಮಿಸ್ಟರ್‌ನಲ್ಲಿ ಅಧ್ಯಯನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಸೆಮಿಸ್ಟರ್ ಪರೀಕ್ಷೆಗಳಲ್ಲಿ ಈತ ಅನುತ್ತೀರ್ಣನಾಗಿದ್ದು, ಇದರಿಂದಾಗಿ ಉಲ್ಲಾಸ್ ಬೇಸತ್ತಿದ್ದ ಎಂದು ತಿಳಿದು ಬಂದಿದೆ. ಈತನ ಸಾವಿಗೆ ನಿಖರ ಕಾರಣಗಳನ್ನು ತಿಳಿಯಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇನ್ನು ಈತನ ಶವವನ್ನು ಜಿಲ್ಲಾಸ್ಪತ್ರೆಗೆ ಕಸದ ಗಾಡಿಯಲ್ಲಿ ಪೊಲೀಸರು ಸಾಗಿಸಿದ್ದು, ಇದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.