ಮಂಗಳೂರು: ಸುಮಾರು ಒಂದು ವರ್ಷಗಳಿಂದ ನಾಲ್ಕು ಪ್ರಕರಣಗಳಿಗೆ ಸಂಬಂಧಿಸಿದ ಹಾಗೆ ವಿಚಾರಣೆಗೆ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಮುನೀರ್ ಯಾನೆ ಅಣ್ಣ ಮುನೀರ್ (48) ಎಂದು ಗುರುತಿಸಲಾಗಿದೆ.
ಈತ ಮಂಗಳೂರಿನ ಕಾವೂರು, ಪಣಂಬೂರು, ಮಂಗಳೂರು ಗ್ರಾಮಾಂತರ, ಮಂಗಳೂರು ದಕ್ಷಿಣ ಪೊಲೀಸು ಠಾಣೆಗಳಿಗೆ ಸಂಬಂಧಿಸಿದ ವ್ಯಾಪ್ತಿಯಲ್ಲಿ ಕಳವು, ಕೊಲೆ ಯತ್ನ, ದರೋಡೆ, ವಂಚನೆ ಇತ್ಯಾದಿ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಬಗ್ಗೆ ಈತನ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಈ ಸಂಬಂಧ ನ್ಯಾಯಾಂಗ ಬಂಧನ ಕ್ಕೂ ಒಳಗಾಗಿದ್ದ.
ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಈತ ಬಳಿ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವಿಚಾರಣೆಗೆ ಬಾರದೆ ತಲೆಮರೆಸಿಕೊಂಡಿದ್ದ. ಸದ್ಯ ಈತ ಸಿಸಿಬಿ ಪೊಲೀಸರ ವಶವಾಗಿದ್ದು, ಈತನನ್ನು ಮುಂದಿನ ಕ್ರಮಕ್ಕಾಗಿ ಕಾವೂರು ಪೊಲೀಸರ ವಶಕ್ಕೆ ನೀಡಲಾಗಿದೆ.