ಬೆಂಗಳೂರು: ಪೊಲೀಸ್ ವಸತಿ ನಿಗಮದ ಡಿಜಿಪಿ ರಾಮಚಂದ್ರ ರಾವ್ ಅವರ ಪುತ್ರಿ ನಟಿ ರನ್ಯಾ ರಾವ್ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್ಐ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮವಾಗಿ 14 kg ಚಿನ್ನವನ್ನು ಮೈಯಲ್ಲಿರಿಸಿಕೊಂಡು ದುಬೈನಿಂದ ಚಿನ್ನ ಕಳ್ಳ ಸಾಗಾಣಿಕೆ ಮಾಡಿದ ರನ್ಯಾ ರಾವ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಮಾರ್ಚ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ತೀರ್ಪಿತ್ತಿದೆ.
ದುಬೈನಿಂದ ಆಗಮಿಸಿದ್ದ ರನ್ಯಾ 14 ಕೆ.ಜಿ. ಚಿನ್ನದ ಗಟ್ಟಿ ಮತ್ತು 800 ಗ್ರಾಂ ಚಿನ್ನದ ಆಭರಣಗಳ ಜೊತೆಗೆ ಡಿಆರ್ಐ ಅಧಿಕಾರಿಗಳ ಬಲೆಗೆ ಬಿದ್ದಿರುವುದಾಗಿದೆ.