Monday, March 30 , 2020 9:36 PM

ಕ್ರೈಂ












RSS ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸಹಿತ ಕರಾವಳಿಯ ಹಿಂದೂ ಮುಖಂಡರ ಹತ್ಯೆಗೆ ಸಂಚು ಪ್ರಕರಣದ ಪ್ರಮುಖ ಆರೋಪಿ ಕುಖ್ಯಾತ ರೌಡಿಶೀಟರ್ ತಸ್ಲೀಮ್



14253

ಮಂಗಳೂರು; ಹಿಂದೂ ಮುಖಂಡರ ಹತ್ಯೆಗೆ ಸಂಚು ನಡೆಸಿದ್ದ ತಂಡವೊಂದನ್ನು ದೆಹಲಿಯ ಪೊಲೀಸರು ಬಂಧಿಸಿದ್ದ ಕುರಿತು ಕಳೆದ ವರ್ಷ ಇಡೀ ರಾಜ್ಯದಲ್ಲಿಯೇ ಭಾರೀ ಸದ್ದು ಮಾಡಿದ್ದ ಪ್ರಕರಣ ಇದೀಗ ಮತ್ತೆ ಸುದ್ದಿಯಾಗಿದೆ. ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಸಹಿತ ಕರಾವಳಿಯ ಹಿಂದೂ ಮುಖಂಡರ ಕೊಲೆಗೆ ಸಂಚು ನಡೆಸಿದ್ದ ಪ್ರಕರಣದಲ್ಲಿ ದೆಹಲಿಯ ವಿಶೇಷ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದರು. ಇಂದು ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಬೊಳ್ಳಾಯಿ ಸಮೀಪದ ನಗ್ರಿ ಶಾಂತಿನಗರದಲ್ಲಿ ಇನ್ನೋವಾ ಕಾರಿನಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದ, ಕೇರಳ ಮೂಲದ ಕುಖ್ಯಾತ ಕ್ರಿಮಿನಲ್, ಮೂಲತಃ ಕಾಸರಗೋಡು ಜಿಲ್ಲೆ ಚೆಮ್ನಾಡ್ ಚೆಂಬರಿಕದ ಕಲಾಲಿಡ್ ಗ್ರಾಮ ನಿವಾಸಿ ತಸ್ಲೀಮ್ ಯಾನೆ ಮುತಾಸ್ಲಿಮ್(45) ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಎನ್ನಲಾಗಿದೆ. ಈತ ಕುಖ್ಯಾತ ಕ್ರಿಮಿನಲ್ ಹಿನ್ನೆಲೆಯುಳ್ಳ ಆರೋಪಿಯಾಗಿದ್ದ ಮಾತ್ರವಲ್ಲದೇ ಹೊರ ರಾಜ್ಯದಲ್ಲಿ ಕೂಡ ಈತನ ವಿರುದ್ಧ ಅನೇಕ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ.

ಘಟನೆಯ ಸಂಪೂರ್ಣ ಮಾಹಿತಿ; ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಬೊಳ್ಳಾಯಿ ಸಮೀಪದ ನಗ್ರಿ ಶಾಂತಿನಗರದಲ್ಲಿ ಮೃತದೇಹವಿರುವ ಕಾರೊಂದು ನಿಂತಿದೆ ಎಂದು ಸುದ್ದಿಯಾಗಿತ್ತು. ನಂತರ ಪೊಲೀಸರ ತನಿಖೆಯಲ್ಲಿ ಗುರುತು ಪತ್ತೆಯಾಗಿ, ಇದು ತಸ್ಲಿಮ್ ಎಂಬಾತನೇ ಎಂದು ತಿಳಿಯಿತು. ತಸ್ಲೀಮ್ ಎರಡು ದಿನಗಳ ಹಿಂದೆ ಗುಲ್ಬರ್ಗಾ ಜೈಲಿನಿಂದ ಬಿಡುಗಡೆಗೊಂಡಿದ್ದು, ಅಲ್ಲಿಂದಲೇ ಆತನನ್ನು ಅಪಹರಣ ಮಾಡಿದ್ದ ಗ್ಯಾಂಗ್ ಕೊಲೆ ನಡೆಸಿದೆ. ಆರೋಪಿಗಳು ಕೊಲೆ ನಡೆಸಿ ಮೃತದೇಹವನ್ನು ಕಾರಿನಲ್ಲಿಟ್ಟು, ಕಾರನ್ನು ಬಿಟ್ಟು ಪರಾರಿಯಾಗಿದ್ದರು ಎನ್ನಲಾಗಿದೆ. ಬೆಳಗ್ಗಿನಿಂದ ಕಾರು ಅಲ್ಲೇ ನಿಂತಿರುವುದನ್ನು ಕಂಡ ಸ್ಥಳೀಯರು ಮಧ್ಯಾಹ್ನದ ವೇಳೆಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಇನ್ನೋವಾ ಕಾರಿನ ಹಿಂಬದಿಯ ಸೀಟಿನಲ್ಲಿ ಮೃತದೇಹ ಪತ್ತೆಯಾಗಿದ್ದು, ರಕ್ತದ ಮಡುವಿನಲ್ಲಿ ತುಂಬಿತ್ತು. ಈತನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಗಳೂರು ಜಿಲ್ಲಾ ವೆನಾಕ್ ಆಸ್ಪತ್ರೆಗೆ ಸಾಗಿಸಲಾಗಿದೆ.

ಕೊಲೆಯಾದ ತಸ್ಲೀಮ್ ೨೦೧೯ರಲ್ಲಿ ಸೆಪ್ಟೆಂಬರ್‌ನಲ್ಲಿ ಮಂಗಳೂರು ಭವಂತಿ ಸ್ಟ್ರೀಟ್ ನ ಜ್ಯುವೆಲ್ಲರಿವೊಂದರಲ್ಲಿ ನಡೆದ ಕಳವು ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಇಬ್ಬರು ಅಫ್ಘಾನಿಸ್ಥಾನ ಮೂಲದ ಕುಖ್ಯಾತ ರೌಡಿಗಳ ಜತೆ ಸೇರಿ ಈ ಕಳವು ಪ್ರಕರಣ ನಡೆಸಿ, ಮಂಗಳೂರು ಪೊಲೀಸರಿಗೆ ಸಿಕ್ಕಿ ಬಿದ್ದಿದ್ದ. ಜತೆಗೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾಲಿಯಾ ರಫೀಕ್ ಕೊಲೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ. ಇಷ್ಟು ಮಾತ್ರವಲ್ಲದೇ ರಾಜ್ಯದಲ್ಲಿಯೇ ಭಾರೀ ಸದ್ದು ಮಾಡಿದ್ದ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಸಹಿತ ಕರಾವಳಿಯ ಹಿಂದೂ ಮುಖಂಡರ ಕೊಲೆಗೆ ಸಂಚು ನಡೆಸಿದ್ದ ಪ್ರಕರಣದಲ್ಲಿ ಕೂಡ ಆರೋಪಿಯಾಗಿದ್ದ. ತಸ್ಲೀಮ್ ಕೆಲ ದಿನಗಳ ಹಿಂದೆಯಷ್ಟೇ ಗುಲ್ಬರ್ಗಾ ಜೈಲಿನಿಂದ ಬಿಡುಗಡೆಗೊಂಡು ಹೊರ ಬರುತ್ತಿದ್ದಂತೆ ಆತನನ್ನು ತಂಡವೊಂದು ಅಪಹರಣ ನಡೆಸಿತ್ತು. ಈ ಕುರಿತು ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಿಡ್ನಾಪ್ ಆರೋಪಿಗಳ ಹುಡುಕಾಟದಲ್ಲಿ ತೊಡಗಿದ್ದರು. ಮಾತ್ರವಲ್ಲದೇ ಅಲ್ಲಿಯ ಪೊಲೀಸರು ಈ ಸಂಬಂಧ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈತನ ವಿರುದ್ಧ ಕಾಸರಗೋಡಿನ ಬೇಕಲ ಪೊಲೀಸ್ ಠಾಣೆ, ಉಳ್ಳಾಲ ಪೊಲೀಸ್ ಠಾಣೆ ಸೇರಿದಂತೆ ಹೊಸದಿಲ್ಲಿಯ ವಿಶೇಷ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಒಳಸಂಚು ಮತ್ತು ಭಾರತೀಯ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ಸಹಿತ ಮಂಗಳೂರಿನ ಜ್ಯುವೆಲ್ಲರಿ ಕಳವು ಪ್ರಕರಣ ದಾಖಲಾಗಿತ್ತು. ಘಟನಾ ಸ್ಥಳಕ್ಕೆ ದ.ಕ. ಜಿಲ್ಲೆಯ ಎಸ್‌ಪಿ ಚಾರ್ಜ್‌ನಲ್ಲಿರುವ ಉಡುಪಿ ಎಸ್‌ಪಿ ವಿಷ್ಣುವರ್ಧನ್, ದ.ಕ.ಅಡಿಶನಲ್ ಎಸ್‌ಪಿ ಡಾ| ವಿಕ್ರಂ ಅಮ್ಟೆ, ಮಂಗಳೂರು ಡಿಸಿಐಬಿ ಇನ್ಸ್‌ಪೆಕ್ಟರ್ ಚೆಲುವರಾಜು, ಬಂಟ್ವಾಳ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಟಿ.ಡಿ.ನಾಗರಾಜ್, ಬಂಟ್ವಾಳ ನಗರ ಪಿಎಸ್‌ಐ ಅವಿನಾಶ್, ಗ್ರಾಮಾಂತರ ಪಿಎಸ್‌ಐ ಪ್ರಸನ್ನ ಹಾಗೂ ಸಿಬಂದಿ ತೆರಳಿದ್ದು, ಪ್ರಕರಣದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!