Monday, March 30 , 2020 11:08 PM

ಕ್ರೈಂ












ನೂತನ ಸಚಿವರಿಗೆ ನಾಳೆ ಬೆಳಿಗ್ಗೆ ಖಾತೆ ಹಂಚಿಕೆ; ಯಡಿಯೂರಪ್ಪ ಹೇಳಿಕೆ



56

ಶಿವಮೊಗ್ಗ: ಇತ್ತೀಚೆಗೆ ಪ್ರಮಾಣ ವಚನ ಸ್ವೀಕರಿಸಿದ ನೂತನ ಸಚಿವರಿಗೆ ಸೋಮವಾರ ಬೆಳಿಗ್ಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದ ನಿವಾಸದಲ್ಲಿ ಮಾತನಾಡಿದ ಅವರು, ನಿನ್ನೆ ಶನಿವಾರ, ಇಂದು ಭಾನುವಾರ ಆದ್ದರಿಂದ ಖಾತೆ ಹಂಚಿಕೆ ಮಾಡಿಲ್ಲ. ನಾಳೆ ಬೆಳಿಗ್ಗೆ ಖಾತೆ ಹಂಚಿಕೆ ಮಾಡುತ್ತೇನೆ ಎಂದರು.

ಉಮೇಶ್ ಕತ್ತಿ ಅವರಿಗೆ ಮೊದಲನೇ ಪಟ್ಟಿಯಲ್ಲೇ ಸಚಿವ ಸ್ಥಾನ ನೀಡಬೇಕಿತ್ತು. ಆದರೆ ಅನಿವಾರ್ಯ ಕಾರಣದಿಂದ ಸಂಪುಟಕ್ಕೆ ತೆಗೆದುಕೊಳ್ಳಲು ಸಾಧ್ಯವಾಗಿಲ್ಲ. ಸಂಪುಟ ವಿಸ್ತರಣೆ ಬಳಿಕ ಕತ್ತಿ‌ ನಮ್ಮ‌ ನಿವಾಸಕ್ಕೆ ಭೇಟಿ ನೀಡಿದ್ದರು. ನಾನು ಅವರೊಂದಿಗೆ ಮಾತನಾಡಿದ್ದೇನೆ. ಮುಂದಿನ ದಿನದಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದರು. ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಸಚಿವ ಸ್ಥಾನದ ಅಪೇಕ್ಷಿತರಿದ್ದಾರೆ. ಅನಿರ್ವಾಯ ಸ್ಥಿತಿ ಇದೆ ಎಂದು ಎಲ್ಲರಿಗೂ ಮನವರಿಕೆ ಮಾಡಿದ್ದೇನೆ. ಆದರೆ ಮೂಲ ಬಿಜೆಪಿಗರಿಗೆ ಹಾಗೂ ವಲಸೆ ಬಿಜೆಪಿಗರ ನಡುವೆ ಸಚಿವ ಸ್ಥಾನದ ಬಗ್ಗೆ ಗೊಂದಲವಿಲ್ಲ ಎಂದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಂಗ್ ಮೇಕರ್ ಆಗುತ್ತಾರೆ ಎಂಬ ಹೊರಟ್ಟಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಸಿದ್ದರಾಮಯ್ಯ, ಕುಮಾರಸ್ವಾಮಿ, ಹೊರಟ್ಟಿ ಅವರು ರಾಜಕೀಯ ಕಾರಣಕ್ಕಾಗಿ ಹೇಳಿಕೆ ಕೊಡುತ್ತಿರುತ್ತಾರೆ. ಅದಕ್ಕೆಲ್ಲಾ ನಾನು ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು. ಬಜೆಟ್ ನಂತರ ನಿಗಮ‌ ಮಂಡಳಿ ನೇಮಕ ಮಾಡಲಾಗುವುದು ಎಂದ ಅವರು, ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಪ್ರತಿ ಲೀ. ಗೆ 20 ಪೈಸೆ ಪ್ರೋತ್ಸಾಹ ಧನ ನೀಡುವ ಬಗ್ಗೆ  ಬಜೆಟ್ ನಲ್ಲಿ ತೀರ್ಮಾನಿಸುವುದಾಗಿ ಹೇಳಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ದ.ಕ.ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಯ ದೃಷ್ಟಿಯಿಂದ ದಿನಸಿ ಅಂಗಡಿಗಳು ಮಾ....

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...


ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...


ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...

ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...


ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...

ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...


Copyright 2019 www.policevarthe.com | All Right Reserved
error: Content is protected !!