Monday, March 30 , 2020 10:00 PM

ಕ್ರೈಂ












ಕರಾವಳಿಯ ಭೂಗತ ಪಾತಕಿ ರವಿ ಪೂಜಾರಿ ಮತ್ತೆ ಬಂಧನ; ಶೀಘ್ರ ಬೆಂಗಳೂರಿಗೆ!



307

ಮಂಗಳೂರು: ಭೂಗತ ಪಾತಕಿ ಕರಾವಳಿ ಮೂಲದ ರವಿ ಪೂಜಾರಿಯನ್ನು ಆಫ್ರಿಕನ್‌ ದೇಶವೊಂದರಲ್ಲಿ ಮತ್ತೆ ಬಂಧಿಸು ವಲ್ಲಿ ದೇಶದ ರಾ (ರಿಸರ್ಚ್‌ ಆ್ಯಂಡ್‌ ಅನಾಲಿಸಿಸ್‌ ವಿಂಗ್‌)ದ ಪೊಲೀಸರು ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಆತನನ್ನು ಭಾರತಕ್ಕೆ ಕರೆತರಲು ಪ್ರಯತ್ನಗಳು ಸಾಗುತ್ತಿವೆ. ಕಳೆದ ವರ್ಷ ಸೆನೆಗಲ್‌ನಲ್ಲಿ ಬಂಧನಕ್ಕೊಳಗಾಗಿದ್ದ ರವಿ ಪೂಜಾರಿ ಕೆಲವು ತಿಂಗಳ ಬಳಿಕ ಜಾಮೀನು ಮೇಲೆ ಬಿಡುಗಡೆಗೊಂಡು ಭೂಗತನಾಗಿದ್ದ. ಆದರೆ ರಾ ಪೊಲೀಸರು ಸೆನೆಗಲ್‌ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳ ನೆರವಿನೊಂದಿಗೆ ಆತನ ಚಲನವಲನಗಳ ಮೇಲೆ ನಿಗಾ ಇರಿಸಿದ್ದರು. ನಕಲಿ ಪಾಸ್‌ಪೋರ್ಟ್‌ ಸಹಿತ ಆತನ ಕುರಿತಾದ ಮಹತ್ವದ ಮಾಹಿತಿ ಭಾರತೀಯ ಪೊಲೀಸರಿಗೆ ಲಭಿಸಿತ್ತು.

ಈ ಮಾಹಿತಿಯನ್ನು ಆಧರಿಸಿ ಪೊಲೀಸರು ಕೆಲವು ತಿಂಗಳುಗಳಿಂದ ರವಿ ಪೂಜಾರಿ ಬಂಧನಕ್ಕೆ ಪ್ರಯತ್ನಿಸುತ್ತಿದ್ದರು. ಕೊನೆಗೂ ಆಫ್ರಿಕನ್‌ ದೇಶವೊಂದರಲ್ಲಿ ಶುಕ್ರವಾರ ಮಧ್ಯಾಹ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧನ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಪೊಲೀಸರು ಮತ್ತು “ರಾ’ದ ಉನ್ನತ ಅಧಿಕಾರಿಗಳು ಅಲ್ಲಿಗೆ ತೆರಳಿದ್ದು, ಒಂದೆರಡು ದಿನಗಳಲ್ಲಿ ರವಿ ಪೂಜಾರಿಯನ್ನು ದಿಲ್ಲಿ ಅಥವಾ ಬೆಂಗಳೂರಿಗೆ ಕರೆತರುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ. 20 ವರ್ಷಗಳ ಹಿಂದೆ ಮುಂಬಯಿಯಿಂದ ಭೂಗತನಾಗಿದ್ದ ರವಿ ಪೂಜಾರಿ ಮಲೇಶ್ಯಾ ಸಹಿತ ಹಲವು ದೇಶಗಳಲ್ಲಿ ತಲೆಮರೆಸಿಕೊಂಡಿದ್ದ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!