Monday, March 30 , 2020 11:12 PM

ಕ್ರೈಂ












ಪಾಕಿಸ್ಥಾನಕ್ಕೆ ಜೈಕಾರ ಹಾಕುವ ದೇಶದ್ರೋಹಿಗಳಿಗೆ ಕಠಿನ ಕಾನೂನು ಕ್ರಮ; ನಳಿನ್‌ ಕುಮಾರ್‌ ಕಟೀಲು



83

ಪುತ್ತೂರು: ನಮ್ಮ ದೇಶದಲ್ಲಿ ಹುಟ್ಟಿ ಇಲ್ಲಿನ ನೀರು, ಆಹಾರ ಸಹಿತ ಎಲ್ಲ ಅವಕಾಶ ಬಳಸಿಕೊಂಡು ಪಾಕಿಸ್ಥಾನಕ್ಕೆ ಜೈಕಾರ ಹಾಕುವ ದೇಶದ್ರೋಹಿಗಳಿಗೆ ಕಠಿನ ಕಾನೂನು ಕ್ರಮದ ಅನಿವಾರ್ಯತೆ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಹೇಳಿದ್ದಾರೆ. ಪುತ್ತೂರಿನಲ್ಲಿ ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ಮಾಧ್ಯಮಗಳ ಜತೆ ಮಾತನಾಡಿದರು. ರಾಜಕೀಯವಾಗಿ ಯಾವುದೇ ಪಕ್ಷಗಳಿಗೆ ಬೈಯಬಹುದು. ಅದು ಪ್ರಜಾಪ್ರಭುತ್ವದ ಹಕ್ಕು. ಆದರೆ ಈ ದೇಶದಲ್ಲಿದ್ದು ಭಾರತಮಾತೆಗೆ ಜೈಕಾರ ಹಾಕುವುದರ ಬದಲು ದೇಶದ್ರೋಹದ ಕೆಲಸ ಮಾಡುವವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು ಎಂದರು.

ಇಂತಹ ವ್ಯಕ್ತಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಅವರ ಹಿಂದೆ ಯಾರಿದ್ದಾರೆ ಎಂಬ ಕುರಿತೂ ತನಿಖೆ ನಡೆಸಬೇಕಾಗಿದೆ. ಪಾಕಿಸ್ಥಾನಕ್ಕೆ ಜೈಕಾರ ಹಾಕಲು ಅವಕಾಶ ಮಾಡಿಕೊಟ್ಟ ಕಾರ್ಯಕ್ರಮದ ಸಂಘಟಕರ ಮೇಲೂ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್‌ ಮೂಡುಬಿದಿರೆ, ಪುತ್ತೂರು ಮಂಡಲಗಳ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಪಿ.ಜಿ. ಜಗನ್ನಿವಾಸ್‌ ರಾವ್‌ ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ದ.ಕ.ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಯ ದೃಷ್ಟಿಯಿಂದ ದಿನಸಿ ಅಂಗಡಿಗಳು ಮಾ....

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...


ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...


ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...

ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...


ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...

ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...


Copyright 2019 www.policevarthe.com | All Right Reserved
error: Content is protected !!