Monday, March 30 , 2020 9:54 PM

ಕ್ರೈಂ












ಮಂಗಳೂರಲ್ಲಿ ಅಪ್ರಾಪ್ತೆ ಅಪಹರಣ: ಬಾಗಲಕೋಟೆಯಲ್ಲಿ ಆರೋಪಿ ಬಂಧನ



96

ಮಂಗಳೂರು: ಅಪ್ರಾಪ್ತೆಯೊಬ್ಬಳನ್ನ ಅಪಹರಣ ಮಾಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಾಗಲಕೋಟೆಯಲ್ಲಿ ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ನಿವಾಸಿ ಪರಶುರಾಮ (26) ಬಂಧಿತ ಆರೋಪಿ. ಆರೋಪಿಯು ಫೆ.14ರ ಸಂಜೆ ಶಾಲೆಯಿಂದ ಮನೆಗೆ ಬಂದಿರುವ 16 ವರ್ಷದ ಬಾಲಕಿಯನ್ನು ಪುಸಲಾಯಿಸಿ ಮನೆಯಿಂದ ಹೊರಗೆ ಕರೆದುಕೊಂಡು ಹೋಗಿದ್ದಾನೆ. ಇದನ್ನು ಆಸುಪಾಸಿನ ಜನರು ಗಮನಿಸಿದ್ದರು. ಈ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಬಾಲಕಿಯ ತಂದೆ ಪುತ್ರಿ ನಾಪತ್ತೆಯಾಗಿದ್ದು, ಆಕೆಯನ್ನು ಅಪಹರಿಸಲಾಗಿದೆ ಎಂದು ದೂರು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಾವೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಾಗಲಕೋಟೆಯಲ್ಲಿ ಬಂಧಿಸಿ, ಬಾಲಕಿಯನ್ನು ಕರೆದುಕೊಂಡು ಬಂದಿದ್ದಾರೆ. ಬಾಲಕಿಯ ಕುಟುಂಬದವರು ಮತ್ತು ಅಪಹರಣ ಮಾಡಿರುವ ಆರೋಪಿ ಪರಶುರಾಮ ಮೂಲತಃ ಬಾಗಲಕೋಟೆಯವರಾಗಿದ್ದಾರೆ. ಮಂಗಳೂರಿಗೆ ಕೂಲಿ ಕೆಲಸಕ್ಕಾಗಿ ಬಂದವರಾಗಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!