Monday, March 30 , 2020 10:07 PM

ಕ್ರೈಂ












ದೆಹಲಿಯಲ್ಲಿ ಸಿಎಎ ಪರ ಮತ್ತು ವಿರೋಧಿ ಗುಂಪುಗಳ ನಡುವೆ ಕಲ್ಲುತೂರಾಟ



89

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿ ವಿರೋಧಿ ಹೋರಾಟ ಮುಂದುವರಿದಿದೆ. ದೆಹಲಿಯ ಜಫ್ರಾಬಾದ್ ನ ಮೌಜ್ ಪುರ್ ನಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಸಿಎಎ ಪರ ಮತ್ತು ಸಿಎಎ ವಿರೋಧಿ ಗುಂಪಿನ ಜನರ ನಡುವೆ ಕಲ್ಲು ತೂರಾಟ ನಡೆದಿದ್ದು, ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು, ಉದ್ರಿಕ್ತರ ಗಂಪುನ್ನು ಚದುರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.

ಇನ್ನೊಂದೆಡೆ ಕೇಂದ್ರ ಸರ್ಕಾರವು ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕ ನೋಂದಣಿಯನ್ನು ವಾಪಸ್ ಪಡೆಯುವವರೆಗೂ ನಮ್ಮ ಹೋರಾಟ ನಿಲ್ಲಿಸುವುದಿಲ್ಲ ಎಂದು 500ಕ್ಕೂ ಹೆಚ್ಚು ಪ್ರತಿಭಟನಾನಿರತ ಮಹಿಳೆಯರು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ. ಶನಿವಾರ ರಾತ್ರಿ ವೇಳೆಯೇ ರಸ್ತೆಗಿಳಿದ ಪ್ರತಿಭಟನಾನಿರತರು ತ್ರಿವರ್ಣ ಧ್ವಜವನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಇದರಿಂದ ದೆಹಲಿಯ ಸೀಲಾಂಪುರ್, ಮೌಜ್ ಪುರ್ ಮತ್ತು ಯಮುನಾ ವಿಹಾರ್ ರಸ್ತೆಗಳ ನಡುವಿನ ಸಂಪರ್ಕ ಬಂದ್ ಆಗಿದೆ. ದೆಹಲಿಯ ಜಫ್ರಾಬಾದ್ ಮೆಟ್ರೋ ರೈಲ್ವೆ ನಿಲ್ದಾಣದ ಎದುರು ನೆರೆದ ಮಹಿಳೆಯರು ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದ್ದಾರೆ. ಇದರಿಂದ ಮೆಟ್ರೋ ನಿಲ್ದಾಣದ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!