Monday, March 30 , 2020 10:19 PM

ಕ್ರೈಂ












ಕೊರೊನಾ ಭೀತಿ!!!, ಆರೋಗ್ಯ ಸಚಿವರಿಂದ ಜಿಲ್ಲಾಡಳಿತದ ಜೊತೆಗೆ ಮಹತ್ವದ ಸಭೆ; ಗೈರಾದ ಕರಾವಳಿಯ 7 ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು!!!



2589

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಬಹಳಷ್ಟು ಮಹತ್ವದ ಕಾರ್ಯಚರಣೆಯಲ್ಲಿ ತೊಡಗಿಕೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಅನೇಕ ಕ್ರಮಗಳನ್ನು ಕೈಗೊಂಡು ನಿರ್ವಹಣಾ ಮಾಡುತ್ತಿದೆ.

ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಕೊರೊನಾ ಭೀತಿ ಕರಾವಳಿ ಜನರಲ್ಲಿ ಆತಂಕ ಮೂಡಿಸಿದೆ. ಜಿಲ್ಲಾಡಳಿತ ಕರಾವಳಿ ಭಾಗದಲ್ಲಿ ಕೊರೊನಾ ವೈರಸ್ ಬಗ್ಗೆ ಮುನ್ನೆಚ್ಚರಿಕೆ ಕ್ರಮವಾಗಿ ಕೈಗೊಂಡಿರುವ ಕ್ರಮದ ಬಗ್ಗೆ ರಾಜ್ಯದ ಆರೋಗ್ಯ ಸಚಿವ ಶ್ರೀರಾಮುಲು ಅವರು ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು. ಅದರೆ ಜಿಲ್ಲೆಯ 8 ಮಂದಿ ಬಿಜೆಪಿ ಶಾಸಕರ ಪೈಕಿ, ಕೇವಲ ಮಂಗಳೂರು ಶಾಸಕ ಯು.ಟಿ ಖಾದರ್ ಅವರು ಮಾತ್ರ ಭಾಗಿಯಾಗಿದ್ದು, ಉಳಿದ 7 ಮಂದಿ ಶಾಸಕರುಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರೇ ಇತಂಹ ವಿಶೇಷ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.

ಶಾಸಕರು ಜಿಲ್ಲೆಯ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯುವ ಅಥವಾ ತಮ್ಮ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಮತ್ತು ಪರಿಹಾರವನ್ನು ಕಂಡುಕೊಳ್ಳುವ ಉದ್ದೇಶಗಳಿಂದ ವಿಧಾನಸಭೆಯ ಅಧಿವೇಶನದಲ್ಲಿ ಭಾಗಿಯಾಗಿದ್ದರು. ಅದರೆ ಇತಂಹ ತುರ್ತು ಮತ್ತು ವಿಶೇಷ ಕಾಳಜಿವಹಿಸ ಬೇಕಾದ ಈ ರೀತಿಯ ಮಹತ್ವದ ಸಭೆಯಲ್ಲಿ 7 ಮಂದಿ ಬಿಜೆಪಿ ಶಾಸಕರ ಪೈಕಿ ಒಬ್ಬರು ಶಾಸಕರಾದರೂ ಭಾಗಿಯಾಗಬಹುದು ಇತ್ತು ಅಲ್ಲವೇ. ಮಾತ್ರವಲ್ಲದೇ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಇಲ್ಲ. ಆದರೆ ಶಾಸಕ ಯು.ಟಿ ಖಾದರ್ ಅವರು ಭಾಗಿಯಾಗಿದ್ದಾರೆ. ಉಳಿದ ಶಾಸಕರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ  ಯಾಕೆ ಈ ಬಗ್ಗೆ ಗಮನವಹಿಸಲು ಸಾಧ್ಯವಾಗಲಿಲ್ಲ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಈ ಬಗ್ಗೆ ಭಾರೀ ವಿರೋಧಗಳು, ಅಭಿಪ್ರಾಯಗಳು ವ್ಯಕ್ಯವಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!