Monday, March 30 , 2020 10:24 PM

ಕ್ರೈಂ












ಜಿಲ್ಲೆಯಾದ್ಯಂತ ನಾಳೆಯಿಂದ ಸಂಪೂರ್ಣ ಬಂದ್! ಕೇರಳ ಭಾಗದ ಅಂಬ್ಯುಲೆನ್ಸ್ ಗೂ ನಿರ್ಬಂಧ!; ಸಂಸದ ನಳಿನ್ ಕುಮಾರ್ ಕಟೀಲ್



53

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟುಗಳು ಸಂಪೂರ್ಣ ಸ್ತಬ್ದಗೊಳ್ಳಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಮಾರಕ ಕೋವಿಡ್ ಸೋಂಕಿನಿಂದ ಇಡೀ ದೇಶವೇ ಕಂಗೆಟ್ಟಿದೆ ಅಂತೆಯೇ ಪ್ರಧಾನಿ 21 ದಿನಗಳ ಕಾಲ ಲಾಕ್ ಡೌನ್ ಮಾಡಿ ಆದೇಶ ನೀಡಿದ್ದು ಇದರೊಂದಿಗೆ ಅಗತ್ಯ ವಸ್ತುಗಳ ಅಂಗಡಿಗಳು ಸಾರ್ವಜನಿಕರಿಗೆ ಮುಕ್ತವಾಗಿತ್ತು ಆದರೆ ನಾಳೆಯಿಂದ ಅದನ್ನು ಸೇರಿದಂತೆ ಎಲ್ಲಾ ಅಂಗಡಿ ಮುಂಗಟ್ಟು ಬಂದ್ ಆಗಲಿದೆ ಎಂದು ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಸಂಸದರು ಜನರಿಗೆ ಬೇಕಾದ ಎಲ್ಲಾ ಸವಲತ್ತುಗಳನ್ನು ನಾವೇ ಮನೆಗೆ ತಲುಪಿಸುತ್ತೇವೆ. ಸರ್ಕಾರದ ಕಡೆಯಿಂದ ಹೇಗೆ ತಲುಪಿಸೋದು, ಅಪಾರ್ಟ್ ಮೆಂಟ್ ಗಳಿಗೆ ಹೇಗೆ ತಲುಪಿಸೋದು ಅಂತ ಮಾತುಕತೆ ನಡೆಯುತ್ತಿದೆ ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದರು.

ಕೇರಳ ಭಾಗದಿಂದ ಮಂಗಳೂರಿಗೆ ಅಂಬ್ಯುಲೆನ್ಸ್ ಬರುವ ವಿಚಾರವಾಗಿ ಮಾತನಾಡಿದ ಅವರು ಮಂಗಳವಾರ ಅತೀ ಹೆಚ್ಚು ರೋಗಿಗಳು ಕೇರಳದಿಂದ ಮಂಗಳೂರಿಗೆ ಬಂದಿದ್ದಾರೆ. ಆದರೆ ಜಿಲ್ಲಾಡಳಿತ ಒಂದು ನಿರ್ಧಾರ ತೆಗೆದುಕೊಂಡಿದೆ. ಸದ್ಯದ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗಳು ನಮಗೆ ಸಾಕಾಗಲ್ಲ, ಹೀಗಾಗಿ ಹೊರಗಿನ ಯಾವುದೇ ವಾಹನ, ಅಂಬ್ಯುಲೆನ್ಸ್ ಸೇರಿ ಯಾವುದನ್ನೂ ಬಿಡಬಾರದು ಅಂತ ನಿರ್ಧರಿಸಲಾಗಿದೆ. ಎಲ್ಲಾ ಅಂಬ್ಯುಲೆನ್ಸ್ ಗಳನ್ನ ತಲಪಾಡಿ ಗಡಿಯಲ್ಲಿ ನಿರ್ಬಂಧಿಸಲಾಗುತ್ತಿದೆ. ಎಲ್ಲಾ ವಾಹನಗಳನ್ನು ಗಡಿಯಲ್ಲಿ ಬಂದ್ ಮಾಡಲಾಗಿದೆ ಎಂದು ಹೇಳಿದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು: ಕೋವಿಡ್ -19 ಸೋಂಕು ತಡೆಗಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎರಡು...

ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ ಅಗತ್ಯ ವಸ್ತುಗಳು ಸೇರಿದಂತೆ ಎಲ್ಲಾ ಅಂಗಡಿ...


ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮತ್ತೆ ನಾಲ್ಕು ಪ್ರಕರಣಗಳಲ್ಲಿ ಕೋವಿಡ್-19 ಸೋಂಕು...

ಬೀಜಿಂಗ್‌: ಕೋವಿಡ್ 19 ಸೋಂಕಿನಿಂದ ಆರ್ಥಿಕ ಕ್ಷೇತ್ರ, ಉದ್ಯಮ ಕ್ಷೇತ್ರ, ಷೇರು ಮಾರುಕಟ್ಟೆ,...


ಮಂಗಳೂರು; ನಗರದಲ್ಲಿ ಸರಕಾರದ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಏಳು ಜನರನ್ನು...

ಮಂಗಳೂರು: ಅಪಾಯಕಾರಿ ಕೋವಿಡ್-19 ಸೋಂಕು ಹರಡದಂತೆ ಮಂಜಾಗೃತಾ ಕ್ರಮವಾಗಿ ಮುಖ್ಯಮಂತ್ರಿ ಬಿ ಎಸ್...


ಬೆಂಗಳೂರು: ಕೋವಿಡ್ 19 ವೈರಸ್ ಮಹಾಮಾರಿ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಲಾಕ್ ಡೌನ್...

ಹೊಸದಿಲ್ಲಿ: ಅಪಾಯಕಾರಿ ಕೋವಿಡ್-19 ಸೊಂಕಿತರ ಪ್ರಮಾಣ ದೇಶದಲ್ಲಿ ಹೆಚ್ಚುತ್ತಿದ್ದು, ಹಲವು ರಾಜ್ಯಗಳು...


Copyright 2019 www.policevarthe.com | All Right Reserved
error: Content is protected !!