ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರನ್ನೊಳಗೊಂಡು ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿ, ಕೆಲ ಅಧಿಕಾರಿಗಳ ಮನೆ, ಕಚೇರಿಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಕಲ್ಬುರ್ಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ದಾಳಿ ನಡೆಸಿ ಪರಿಶೋಧಿಸಿದ್ದಾರೆ.
ಎಂಟು ಮಂದಿ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮೊದಲಾದವರ ಮನೆಗಳಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.
ಕೋಲಾರದ ಬೆಸ್ಕಾಂ ಎಇಇ ಜಿ. ನಾಗರಾಜ್, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ವಿಭಾಗದ ಜಿಲ್ಲಾ ಸಂಖ್ಯಾಶಾಸ್ತ್ರೀಯ ಅಧಿಕಾರಿ ಜಿ.ಎಸ್. ನಾಗರಾಜು, ತುಮಕೂರಿನ ತಾವರೆಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಜಗದೀಶ್ ಅವರ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ.