ಮಂಗಳೂರು: ಕಾರಾಗೃಹ ಇಲಾಖೆಯ ಡಿಜಿ ಮಾಲಿನಿ ಕೃಷ್ಣಮೂರ್ತಿ ಆವರು ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ಫುಡ್ ಫಾಯ್ಸನ್‌ಗೆ ತುತ್ತಾಗಿ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿಚಾರಣಾಧೀನ ಖೈದಿಗಳ ಆರೋಗ್ಯ ಸ್ಥಿತಿಯ ಬಗ್ಗೆ ಖುದ್ದು ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ತಾವು ವೆನ್ ಲಾಕ್ ಆಸ್ಪತ್ರೆಯ ಅಧೀಕ್ಷಕರಲ್ಲಿ ಮಾತನಾಡಿದ್ದೇನೆ. ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಷಾಹಾರ ಸೇವಿಸಿ 45 ಮಂದಿ ವಿಚಾರಣಾಧೀನ ಖೈದಿಗಳು ಆರೋಗ್ಯ ಕೆಡಿಸಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈಗ ಅವರೆಲ್ಲರೂ ಚೇತರಿಸಿಕೊಳ್ಳುತ್ತಿದ್ದಾರೆ. ಐಸಿಯುನಲ್ಲಿದ್ದ ಖೈದಿಯ ಆರೋಗ್ಯ ಸ್ಥಿರವಾಗಿದೆ. ಚೇತರಿಸಿಕೊಂಡಿರುವ ರೋಗಿಗಳು ಜೈಲಿಗೆ ಮತ್ತೆ ವರ್ಗಾವಣೊಳ್ಳಲಿರುವುದಾಗಿ ಮಾಹಿತಿ ನೀಡಿದ್ದಾರೆ.
ಇನ್ನು ಖೈದಿಗಳು ಸೇವಿಸಿದ ಆಹಾರ ಸ್ಯಾಂಪಲ್ ಅನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಒಂದು ವಾರಗಳಲ್ಲಿ ವರದಿ ಬರುವ ಸಾಧ್ಯತೆ ಇದೆ. ನೀರಿನ ಮಾದರಿಯನ್ನು ಆಸ್ಪತ್ರೆಯಲ್ಲೇ ಪರೀಕ್ಷೆ ಮಾಡಲಾಗಿದ್ದು, ವರದಿ ಬರಬೇಕಾಗಿದೆ.
ಇನ್ನು ಖೈದಿಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿನ್ನೆಲೆ ಆಸ್ಪತ್ರೆಯ ಸುತ್ತ ಭದ್ರತೆ ಹೆಚ್ಚಿಸಲಾಗಿದೆ.