ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿನ ಜಡೆ ಜಗಳ ಸದ್ಯ ಸಾರ್ವಜನಿಕ ವಲಯದಲ್ಲಿ ನಡೆಯುತ್ತಿರುವ ಬಿಸಿ ಬಿಸಿ ಚರ್ಚೆ
ಕೆಲ ಸಮಯದಿಂದ ಹೆಚ್ಚು ಸುದ್ದಿಯಲ್ಲಿರುವ ಐಜಿಪಿ ರೂಪಾ ಅವರು ಇತ್ತೀಚೆಗಷ್ಟೇ ಇನ್ನೆೊಂದು ಪ್ರಕರಣದಲ್ಲಿ ಸದ್ದು ಮಾಡಿದ್ದರು.
ರೂಪಾ ಅವರು ಡಿಐಜಿ ವರ್ತಿಕಾ ಕಟಿಯಾರ್ ವಿರುದ್ಧ ಮಾಡಿರುವ ಆರೋಪ ಆಧಾರರಹಿತವಾದದ್ದು, ಅದಕ್ಕೆ ಯಾವುದೇ ಸಾಕ್ಷಿ ಇಲ್ಲ ಎಂದು ರಾಷ್ಟ್ರೀಯ ಪೊಲೀಸ್ ಅಕಾಡೆಮಿ ಮೂಲಗಳು ಮಾಹಿತಿ ನೀಡಿದೆ.
ವರ್ತಿಕಾ ಅವರು ರೂಪಾ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ‘ರೂಪಾ ಅವರು ಕೆಳಹಂತದ ಸಿಬ್ಬಂದಿಗಳನ್ನು ಬಳಸಿಕೊಂಡು ತಮ್ಮ ಕಚೇರಿಯಿಂದ ದಾಖಲೆಗಳನ್ನು ಸಂಗ್ರಹಿಸಿರುವುದಾಗಿ’ ದೂರು ನೀಡಿದ್ದರು. ಇದಕ್ಕೆ ಪ್ರತಿಯಾಗಿ ರೂಪಾ ಸಹ ಪ್ರತಿ ದೂರು ನೀಡಿದ್ದು, ವರ್ತಿಕಾ ಪೂರಕ ಸಾಕ್ಷ್ಯಾಧಾರಗಳನ್ನು ನೀಡಿಲ್ಲ. ಇಂತಹ ಘಟನೆ ಸಂಭವಿಸಿದೆ ಎಂದಾದರೆ ಅವರು ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಿಲ್ಲ. ಅವರು ನಿಷ್ಪಕ್ಷಪಾತವಾಗಿ ಇಲಾಖಾ ಮುಖ್ಯಸ್ಥರಿಗೆ ದೂರು ನೀಡಬಹುದಿತ್ತು. ಆದರೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೇರವಾಗಿ ಪತ್ರ ಬರೆದಿದ್ದಾರೆ. ಇದು ನನ್ನ ಖ್ಯಾತಿಗೆ ಕಳಂಕ ತರುವ ಉದ್ದೇಶವಾಗಿದ್ದು, ಮಾನಹಾನಿ ಮಾಡಲು ಈ ರೀತಿ ಮಾಡಿದ್ದಾರೆಂದು ಅವರು ಹೇಳಿದ್ದಾರೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಪತ್ರ ಬರೆಯದೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಗೆ ಪತ್ರ ಬರೆದಿರುವುದು ಅವರ ಅವಿಧೇಯಕ ಕ್ರಮ ಎಂದು ಹೇಳಿದ್ದಾರೆ. ಈ ಕಾರಣಕ್ಕೆ ಮತ್ತು ಹಿಂದಿನ ಕೆಲವು ನಿದರ್ಶನ ನೀಡಿ ವರ್ತಿಕಾ ವಿರುದ್ಧ ಶಿಸ್ತು ಕ್ರಮ ಜರುಗಿಸುವಂತೆಯೂ ರೂಪಾ ದೂರಿನಲ್ಲಿ ತಿಳಿಸಿದ್ದರು.