ಸ್ಥಳೀಯ ರಿಂದ ಮಗುವಿನ ರಕ್ಷಣೆ, ಆಸ್ಪತ್ರೆಗೆ ದಾಖಲು
ತುಮಕೂರು: ನಿರ್ಜನ ಪ್ರದೇಶದಲ್ಲಿರುವ ಪೊದೆಯೊಂದರಲ್ಲಿ ನವಜಾತ ಹೆಣ್ಣು ಶಿಶುವೊಂದನ್ನು ಬಿಟ್ಟು ಹೋದ ಅಮಾನವೀಯ ಘಟನೆ ನಗರದ ಸಿರಾ ತಾಲೂಕಿನ ಮಾಟನಹಳ್ಳಿಯಲಿ ನಡೆದಿದ್ದು, ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
ಇಂದು ಮುಂಜಾನೆ ಪೊದೆಯೊಂದರಲ್ಲಿ ಮಗುವಿನ ಅಳುವಿನ ಸದ್ದು ಕೇಳಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಅಲ್ಲಿಗೆ ತೆರಳಿ ನೋಡಿದಾಗ ನವಜಾತ ಹೆಣ್ಣು ಮಗುವನ್ನು ಅಲ್ಲಿ ತಂದು ಬಿಟ್ಟು ಹೋಗಿರುವುದು ತಿಳಿದು ಬಂದಿದೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಅವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಅನಂತರ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ.
ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಕೃತ್ಯ ಎಸಗಿದ ಹೃದಯಹೀನರ ಪತ್ತೆಗೆ ತನಿಖೆ ಆರಂಭ ಮಾಡಿದ್ದಾರೆ.