ಮೂಡಬಿದಿರೆ: ಅಪ್ರಾಪ್ತ ಬಾಲಕಿಯ ಮೇಲೆ ಮಾನಭಂಗವೆಸಗಲು ಪ್ರಯತ್ನ ನಡೆಸಿದ ಆರೋಪಿಯನ್ನು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬಂಧಿತ ಆರೋಪಿಯನ್ನು ಅಲಂಗಾರು ಉಳಿಯ ನಿವಾಸಿ ಪವನ್ ಕುಮಾರ್ ಎಂದು ಗುರುತಿಸಲಾಗಿದೆ.
ಬಾಲಕಿ ಟ್ಯೂಷನ್ ಮುಗಿಸಿ ತನ್ನ ಸೈಕಲ್‌ನಲ್ಲಿ ಮನೆಗೆ ತೆರಳುತ್ತಿದ್ದಳು. ಈ ವೇಳೆ ಬೈಕ್‌ನಲ್ಲಿ ಆಕೆಯನ್ನು ಹಿಂಬಾಲಿಸಿಕೊಂಡು ಬಂದು ನಿರಂಜನ ಪ್ರದೇಶದಲ್ಲಿ ಆಕೆಯನ್ನು ಅಡ್ಡ ಗಟ್ಟಿ ಅತ್ಯಾಚಾರಕ್ಕೆ ಪ್ರಯತ್ನ ನಡೆಸಿದ್ದಾನೆ. ಬಾಲಕಿ ಈತನಿಂದ ತಪ್ಪಿಸಿಕೊಂಡು ಮನೆಗೆ ಓಡಿ ಹೋಗಿದ್ದಾಳೆ.
ಈ ಸಮಯದಲ್ಲಿ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಯ ಬಗ್ಗೆ ಮಾಹಿತಿ ಸಂಗ್ರಹಿಸಿದ ಪೊಲೀಸರು, ಆತನನ್ನು ಬಂಧಿಸಿದ್ದಾರೆ. ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.