ಉಡುಪಿ: ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾಜಿ ಸಚಿವ ಪ್ರಮೋದ್ ಮದ್ವರಾಜ್ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಮಲ್ಪೆಯಲ್ಲಿ ಮೀನು ಕಳ್ಳತನ ಮಾಡಿದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಲಾಗಿತ್ತು. ಘಟನೆಯ ಬಳಿಕ ನಡೆದ ಸಂಗತಿಗಳ ವಿರುದ್ದ ಮಲ್ಪೆಯ ಮೀನುಗಾರರ ಸಂಘ ಮತ್ತು ಇತರ ಮೀನುಗಾರರ ಸಂಘ ಪ್ರತಿಭಟನೆ ಆಯೋಜನೆ ಮಾಡಿದ್ದವು.
ಈ ಪ್ರತಿಭಟನೆಯಲ್ಲಿ ಪ್ರಮೋದ್ ಮಧ್ವರಾಜ್ ಅವರು ಮಹಿಳೆಯನ್ನು ಮರಕ್ಕೆ ಕಟ್ಟಿ ಹಾಕಿ ಮಾಡಿದ ಹಲ್ಲೆಯನ್ನು ಸಮರ್ಥನೆ ಮಾಡುವಂತೆ ಮಾತನಾಡಿದ್ದಾರೆ. ಈ ಭಾಷಣ ಇಂತಹ ಅಮಾನವೀಯ ಕ್ರಮಗಳಿಗೆ ಪ್ರೋತ್ಸಾಹ ನೀಡುವಂತಿದೆ ಎಂದು ಉಡುಪಿ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.