ಸುಳ್ಯ: ರಸ್ತೆಯಲ್ಲಿ ಕಾರು ಚಲಾಯಿಸುತ್ತಾ ಅದರಲ್ಲಿ ಹುಚ್ಚಾಟ ಪ್ರದರ್ಶನ ಮಾಡಿದ ಪುಂಡರ ವಿರುದ್ದ ಸುಳ್ಯ ಪೊಲೀಸರು ಸುಮೋಟೊ ಪ್ರಕರಣ ದಾಖಲಿಸಿದ್ದಾರೆ.
ಕಾರಿನಲ್ಲಿ ಏಳು ಜನ ಪ್ರಯಾಣ ಮಾಡುತ್ತಿದ್ದು, ಕಾರಿನ ಸನ್ ರೂಫ್ ಮತ್ತು ಕಿಟಕಿಯಿಂದ ಐವರು ಹೊರಗೆ ಬಂದು ಚಲಿಸುತ್ತಿದ್ದ ಕಾರಿನ ಹೊರಗೆ ಡ್ಯಾನ್ಸ್ ಆಡುತ್ತಾ ಹುಚ್ಚಾಟ ಮೆರೆದಿದ್ದಾರೆ. ಪುಂಡರ ಈ ನಡವಳಿಕೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಆಕ್ರೋಶಕ್ಕೂ ಕಾರಣವಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ.



















