ಬೆಂಗಳೂರು: ರಾಜ್ಯ ಸರ್ಕಾರ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಸರ್ಜರಿ ಮಾಡಿದೆ. ಇದೀಗ 6 ಮಂದಿ ಕೆಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ, ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಿದೆ.
ನಂಜುಂಡೇಗೌಡ, ಕೆಎಎಸ್: ಪ್ರಧಾನ ವ್ಯವಸ್ಥಾಪಕರು, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ನಂದಿನಿ ಪಿ.ಎಂ ಕೆ.ಎ.ಎಸ್ (ಹಿರಿಯ ಶ್ರೇಣಿ) ಅವರನ್ನು ನಿರ್ದೇಶಕರು, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಇಲ್ಲಿಂದ ವಿಶೇಷ ಭೂಸ್ವಾಧೀನಾಧಿಕಾರಿ-6, ಡಾ.ಶಿವರಾಮ್ ಕಾರಂತ ಬಡಾವಣೆ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ, ಬೆಂಗಳೂರು ಇಲ್ಲಿಗೆ ನೇಮಕ ಮಾಡಲಾಗಿದೆ.
ಸಿದ್ದಪ್ಪ ಹುಲ್ಲೋಳಿ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ), ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ ಇಲ್ಲಿಂದ ಉಪ ಆಯುಕ್ತರು, ಮಹಾನಗರ ಪಾಲಿಕೆ ಬೆಳಗಾವಿ, ಶ್ರೀಮತಿ ರೇಷ್ಮಾ ತಾಳಿಕೋಟೆ, ಕೆ.ಎ.ಎಸ್ ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ. ಕಾರ್ಯದರ್ಶಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ, ಸವದತ್ತಿ, ಬೆಳಗಾವಿ ಜಿಲ್ಲೆ ಇಲ್ಲಿನ ಹುದ್ದೆಗೆ ಕ.ನಾ.ಸೇ ನಿಯಮ-68ರ ಅನ್ವಯ ಅಧಿಕ ಪ್ರಭಾರದಲ್ಲಿ ಮುಂದುವರೆಸಿದೆ.
ರೇಷ್ಮಾ ತಾಳಿಕೋಟೆ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಉಪ ಆಯುಕ್ತರು ಮಹಾನಗರ ಪಾಲಿಕೆ, ಬೆಳಗಾವಿ ಇಲ್ಲಿಂದ ಮುಖ್ಯ ಆಡಳಿತಾಧಿಕಾರಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ, ಬೆಳಗಾಳಿ ಡಾ.ಸಿದ್ಧಪ್ಪ ಹುಲ್ಲೋಳಿ, ಕೆ.ಎ.ಎಸ್ (ಕಿರಿಯ ಶ್ರೇಣಿ) ಇವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಳಕ್ಕೆ ನೇಮಕ ಮಾಡಲಾಗಿದೆ.1
ಶಿವಾನಂದ ಪಿ ಸಾಗರ್ ಅವರನ್ನು ಕೆ.ಎ.ಎಸ್ (ಕಿರಿಯ ಶ್ರೇಣಿ) ಸಹಾಯಕ ಆಯುಕ್ತರು ವಿಶೇಷಾಧಿಕಾ2ರಿ ಹಾಗೂ ಸಕ್ಷಮ ಪ್ರಾಧಿಕಾರಿಯವರ ಕಛೇರಿ ಇಲ್ಲಿದೆ ವರ್ಗಾಹಿಸಿರುವ ಆದೇಶವನ್ನು ಮಾರ್ಪಡಿಸಿ ವಿಶೇಷ ಭೂಸ್ವಾಧೀನಾಧಿಕಾರಿ ಮಲಪ್ರಭ ಯೋಜನೆ-3, ಧಾರವಾಡ ಇಲ್ಲಿಗೆ ನೇಮಕ ಮಾಡಲಾಗಿದೆ.



















