ಮಂಗಳೂರು: ತುಳುನಾಡಿನಲ್ಲಿ ಬಿಸಿಲಿನ ಝಳ ಹೆಚ್ಚಳವಾಗುತ್ತಿದ್ದು, ಎ.೩೦ರವರೆಗೆ ಬಿಸಿಗಾಳಿಯ ಅಲೆ ಹೆಚ್ಚಾಗುವ ಸಾಧ್ಯತೆ ಇದೆ. ಜನರು ಎಚ್ಚರವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಸೂಚಿಸಿದೆ. ಮುಂದಿನ ಐದು ದಿನಗಳ ಕಾಲ ದ.ಕ, ಉಡುಪಿ ಸಹಿತ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ಅಲೆ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಮಾಡಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ವಹಿಸುವಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಎಚ್ಚರಿಸಿದೆ.
ಮಧ್ಯಾಹ್ನ 1 ರಿಂದ ಅಪರಾಹ್ನ 3 ರವರೆಗೆ ಹೊರಗೆ ಹೋಗಬಾರದು, ತೆಳುವಾದ, ಹಗುರವಾದ ಬಟ್ಟೆಗಳನ್ನು ಧರಿಸಬೇಕು, ನಿರ್ಜಲೀಕರಣವಾಗದಂತೆ ತಡೆಯಲು ಆಗಾಗ ನೀರು ಕುಡಿಯುತ್ತಿರಬೇಕು. ಇಲ್ಲದಿದ್ದರೆ ಬಿಸಿಗಾಳಿಯಿಂದಾಗಿ ಸನ್ ಸ್ಟೋಕ್ ಮತ್ತಿತರ ಸಮಸ್ಯೆಗಳು ಉಂಟಾಗಬಹುದೆಂದು ಇಲಾಖೆ ತಿಳಿಸಿದೆ. ದ.ಕ ಜಿಲ್ಲೆಯ ಗರಿಷ್ಠ ತಾಪಮಾನ ಪ್ರಮಾಣ ಸರಾಸರಿ ಇದೆ. ಜಿಲ್ಲೆಯ ಬಹುತೇಕ ಗಡಿ ಭಾಗಗಳಲ್ಲಿ ಸಂಜೆಯಿಂದ ಮೋಡದ ವಾತಾವರಣದ ಮುನ್ಸೂಚನೆ ಇದ್ದು, ಬಿರುಗಾಳಿ ಸಹಿತ ದಿಢೀರ್ ಮಳೆಯಾಗುವ ಸಾಧ್ಯತೆ ಇದೆ