ಬಂಟ್ವಾಳ: ಮಂಗಳೂರಿನಲ್ಲಿ ದ್ವಿತೀಯ ಪಿಯುಸಿ ಕಲಿಯುತ್ತಿದ್ದ ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಫರಂಗಿಪೇಟೆಯಲ್ಲಿ ನಡೆದಿದೆ.
ನಾಪತ್ತೆಯಾದ ಹುಡುಗನನ್ನು ಕಿದೆಬೆಟ್ಟು ನಿವಾಸಿ ಪದ್ಮನಾಭ ಎಂಬವರ ಪುತ್ರ ದಿಗಂತ್(17) ಎಂದು ಗುರುತಿಸಲಾಗಿದೆ.
ಈತ ಫೆ. 25ರಂದು ಸಂಜೆ ದೇವಸ್ಥಾನಕ್ಕೆ ಹೋಗುವುದಾಗಿ ಮನೆಯಲ್ಲಿ ಹೇಳಿ ಹೋಗಿದ್ದು, ದೇಗುಲಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದಾನೆ. ಹುಡುಕಾಟ ನಡೆಸಿದಾಗ ಆತನ ಚಪ್ಪಲಿ, ಮೊಬೈಲ್ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ.
ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರು ಕೇಸು ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.