ಬೆಂಗಳೂರು: ರಸ್ತೆ ದಾಟುತ್ತಿದ್ದ ವೃದ್ಧೆಗೆ ವಾಹನವೊಂದು ಗುದ್ದಿ ಪರಾರಿಯಾಗಿದ್ದು, ವೃದ್ಧೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಸುಮನಹಳ್ಳಿ ಬಸ್ ಡಿಪೋ ಸಮೀಪ ನಡೆದಿದೆ.
ಘಟನಾ ಸ್ಥಳದಲ್ಲಿ ದೊರೆತ ಚೀಲವೊಂದು ದೊರೆತಿದ್ದು, ಮೃತ ವೃದ್ಧೆ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಢಿಕ್ಕಿ ಹೊಡೆದು ಪರಾರಿಯಾದ ವಾಹನದ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.