ಕಲ್ಬುರ್ಗಿ: ಸದಾ ಒಂದಿಲ್ಲೊಂದು ವಿಚಾರದಲ್ಲಿ ಸುದ್ದಿಯಾಗುತ್ತಿರುವ ಗುಲ್ಬರ್ಗ ವಿಶ್ವವಿದ್ಯಾಲಯದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಏಕಕಾಲಕ್ಕೆ ಐದು ತಂಡಗಳಾಗಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ವಿದ್ಯಾರ್ಥಿಗಳಿಗೆ ಅಂಕಪಟ್ಟಿ ನೀಡುವುದು, ನಕಲಿ ಪ್ರಮಾಣಪತ್ರ ವಿತರಣೆ ಮೊದಲಾದ ಅನೇಕ ಕೆಲಸಗಳನ್ನು ಮಾಡಲು ಲಂಚ ಪಡೆಯುತ್ತಿರುವ ಆರೋಪದ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ. ಪರಿಶೀಲನೆಯ ಸಂದರ್ಭದಲ್ಲಿ ಹಲವಾರು ಅಕ್ರಮಗಳು ಬೆಳಕಿಗೆ ಬಂದಿದೆ ಎಂದು ಹೇಳಲಾಗುತ್ತಿದೆ.
ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಈಗಾಗಲೇ ಅನೇಕ ಅಕ್ರಮಗಳು ನಡೆಯುತ್ತಿದ್ದು, ವಿಶ್ವವಿದ್ಯಾಲಯಕ್ಕೆ ಮಸಿ ಬಳಿಯುವ ಹಲವಾರು ಸಂಗತಿಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ ವಿವಿಯ ಅಧಿಕಾರಿಗಳಿಗೆ ಚುರುಕ್ ಮುಟ್ಟಿಸಲು ಈ ದಾಳಿ ನಡೆದಿದೆ ಎನ್ನಲಾಗುತ್ತಿದೆ.