ಅಶ್ಲೀಲ ವಿಡಿಯೋ ವೈರಲ್ ಮಾಡುವ ಬೆದರಿಕೆ ಒಡ್ಡುತ್ತಿದ್ದ ಖದೀಮ
ಮಂಗಳೂರು: ಸೋಷಿಯಲ್ ಮೀಡಿಯಾ ಬಳಸಿ ಯುವತಿಯರ ಮೊಬೈಲ್ ನಂಬರ್ ಪಡೆದು, ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಕೆ ಒಡ್ಡಿ ಹಣ ಪೀಕಿಸುತ್ತಿದ್ದ ಆರೋಪಿಯನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಕಾರ್ಕಳದ ಈದು ಗ್ರಾಮದ ಸತೀಶ್ ಹೊಸ್ಮಾರು ಎಂದು ಗುರುತಿಸಲಾಗಿದೆ.
ಹುಡುಗಿಯರನ್ನು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಮಾಡಿಕೊಂಡು ಅವರ ಮೊಬೈಲ್ ಸಂಖ್ಯೆಯನ್ನು ಪಡೆದು ಬಳಿಕ ಅವರಿಗೆ ಅಶ್ಲೀಲ ವಿಡಿಯೋ ಇರುವುದಾಗಿ ಬೆದರಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದ. ಹಣ ನೀಡದಿದ್ದಲ್ಲಿ ಅದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಡುತ್ತಿದ್ದ. ಈ ಸಂಬಂಧ ಮಹಿಳೆಯೊಬ್ಬರು ನೀಡಿರುವ ದೂರನ್ನು ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿಯನ್ನು ವಶಕ್ಕೆ ಪಡೆದು ಆತನ ಮೊಬೈಲ್‌ನಿಂದ ಹಲವು ಮಾಹಿತಿಗಳನ್ನು ಕಲೆ ಹಾಕಲಾಗಿದೆ. ಆರೋಪಿಯ ವಿರುದ್ಧ ಈಗಾಗಲೇ ಕಳವು, ಮಾನಭಂಗ, ಅತ್ಯಾಚಾರ ಮೊದಲಾದ ಕೋಲು ದಾಖಲಾಗಿದೆ. ಕಾರ್ಕಳ ನಗರ ಠಾಣೆಯಲ್ಲಿ ಕಳವು ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಜೈಲುವಾಸವನ್ನೂ ಈ ಹಿಂದೆ ಸತೀಶ್ ಅನುಭವಿಸಿದ್ದ.