Tuesday, January 21 , 2020 7:21 AM

ಕ್ರೈಂ
ಮಂಗಳೂರಿನ ಲಾಡ್ಜ್ ನಲ್ಲಿ ಪತ್ತೆಯಾದ ಅನುಮಾನಾಸ್ಪದ 8 ಮಂದಿ ಆರೋಪಿಗಳ ಬಂಧನ, 1 ರಿವಾಲ್ವಾರ್, 8 ಗುಂಡುಗಳು ಪೊಲೀಸ್ ವಶಕ್ಕೆ1757

ಮಂಗಳೂರು; ನಗರದ ಲಾಡ್ಜ್ ವೊಂದರಲ್ಲಿ ಪತ್ತೆಯಾಗಿದ್ದ ಸುಮಾರು ಎಂಟು ಮಂದಿ‌ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಗಳಿಂದ ಒಂದು ರಿವಾಲ್ವಾರ್, 8 ಗುಂಡುಗಳು ಹಾಗೂ ಏರ್ ಗನ್ ವೊಂದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಗಳನ್ನು  ಸ್ಯಾಮ್ ಪೀಠರ್, ಮದನ್, ಸುನಿಲ್ ರಾಜ್, ಕೋದಂಡರಾಮ, ಟಿ.ಕೆ.ಬೋಪಣ್ಣ, ಚಿನ್ನಪ್ಪ, ಚೆರಿಯನ್ ಮತ್ತು ಅಬ್ದುಲ್ ಲತೀಫ್ ಎಂದು ಗುರುತಿಸಲಾಗಿದೆ.

ಈ ಬಗ್ಗೆ ನಗರದ ಪೊಲೀಸ್ ಆಯುಕ್ತರಾದ  ಡಾ.ಪಿ.ಎಸ್.ಹರ್ಷ ಅವರು ಸುದ್ದಿಗೋಷ್ಟಿಯಲ್ಲಿ ಮಾತನಾಡಿ ಸ್ವಾತಂತ್ಯೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ‌ನಗರದಾದ್ಯಂತ ಬಂದೋಬಸ್ತ್ ಮಾಡಲಾಗಿತ್ತು. ಈ ವೇಳೆ ಪಂಪ್ ವೆಲ್ ಬಳಿ ಅನುಮಾನಾಸ್ಪದ ಕಾರು ಪತ್ತೆಯಾಗಿತ್ತು. ಹಾಗೂ ಭಾರತ ಸರ್ಕಾರದ ಬೋರ್ಡ್ ಹಾಕಿ ಟಿಂಟ್ ಹಾಕಿದ ಕಾರು ಇತ್ತು. ಪೊಲೀಸರು ತಪಾಸಣೆಗೆ ಮುಂದಾದಾಗ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆ ಬಳಿಕ ಪೊಲೀಸರು ಒಟ್ಟು 8 ಜನರನ್ನ ಬಂಧಿಸಿದ್ದಾರೆ. ಈ ತಂಡದ ನಟೋರಿಯಸ್ ಲೀಡರ್ ಕೇರಳ ಮೂಲದ ಸ್ಯಾಮ್ ಪೀಠರ್ ಎಂಬಾತನಾಗಿದ್ದು, ಈತನಿಗೆ ಕೊಲ್ಕತ್ತಾ, ಭುವನೇಶ್ವರ ಸೇರಿದಂತೆ ಹಲವೆಡೆ ಈತನಿಗೆ ಸಂಪರ್ಕವಿದೆ. ಇವರ ಈ ತಂಡ ಸರ್ಕಾರಿ ಅಧಿಕಾರಿಗಳ ಥರ ಇವರಿಗೆ 5 ಗನ್ ಮ್ಯಾನ್ ರೀತಿ ಇದ್ದರು. ಮಾತ್ರವಲ್ಲದೇ ಇವರಿಗೆ ನೆರವು ನೀಡಿದ ಲತೀಫ್ ಮತ್ತು ಚೆರಿಯನ್ ಎಂಬ ಮಂಗಳೂರು ನಿವಾಸಿಗಳನ್ನು ಬಂಧಿಸಲಾಗಿದೆ.

ಇದೊಂದು ಅಂತರಾಜ್ಯ ವಂಚನಾ ಜಾಲ ಎನ್ನುವುದು ಮೇಲ್ನೋಟಕ್ಕೆ ಗೊತ್ತಾಗಿದೆ. ಕೇಂದ್ರ ಸರ್ಕಾರದ ಅಧಿಕಾರಿಗಳ ಹೆಸರಿನಲ್ಲಿ ವಂಚಿಸುತ್ತಿದ್ದರು. ಈ ಬಗ್ಗೆ ಸಮಗ್ರ ತನಿಖೆಗೆ ಪ್ರತ್ಯೇಕ ತಂಡ ರಚನೆ ಮಾಡಲಾಗಿದ್ದು, ಇವರ ಜಾಲದ ಬಗ್ಗೆ ಮತ್ತು ಆರ್ಥಿಕ ಜಾಲದ ಬಗ್ಗೆ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಕಾರ್ಯಾಚರಣೆಯಲ್ಲಿ ಕದ್ರಿ ಠಾಣೆಯ ಇನ್ಸ್ ಫೆಕ್ಟರ್ ಶಾಂತರಾಮ, ಸಬ್ ಇನ್ಸ್ ಫೆಕ್ಟರ್ ಮಾರುತಿ, ಸಿಬ್ಬಂದಿಗಳಾದ ಎಎಸ್ಐ‌ ಧನರಾಜ್, ಪ್ರಶಾಂತ್, ಲೋಕೇಶ್, ನಾಗರಾಜ, ಮೋಹನ್ ಹಾಗೂ ದೇವಿ ಪ್ರಸಾದ್ ಅವರು ಭಾಗವಹಿಸಿದ್ದರು.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ಬಜ್ಪೆಯ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್‌ವೊಂದು ಪತ್ತೆಯಾದ...

ಉಳ್ಳಾಲ: ಉಳ್ಳಾಲಹೊಯ್ಗೆ ಬಳಿಯ ನೇತ್ರಾವತಿ ನದಿಯಲ್ಲಿ ನಡೆದ ದೋಣಿ ದುರಂತದಲ್ಲಿ ಯುವತಿಯೊಬ್ಬಳು...


ಮಂಗಳೂರು: ನಗರದಲ್ಲಿ ಡಿ. 19ರಂದು ನಡೆದ ಹಿಂಸಾಚಾರದಲ್ಲಿ ತೊಡಗಿದವರನ್ನು ಸಿಸಿ ಕೆಮರಾ,...

ನವದೆಹಲಿ: ಮಹತ್ವದ ಬೆಳವಣಿಗೆ ಎಂಬಂತೆ 2012ರ ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ...


ಕೊಚ್ಚಿ: ದೇಶಾದ್ಯಂತ ಹಿಂದೂ ಸಂಘಟನೆಗಳು ಲವ್‌ ಜೆಹಾದ್‌ ಬಗ್ಗೆ ತಮ್ಮ ಆತಂಕ...

ಬೆಂಗಳೂರು: ಸಿಎಎ, ಎನ್​ಆರ್​ಸಿ ವಿರೋಧಿಸಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ...


ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸಂಸದ ನಳಿನ್ ಕುಮಾರ್ ಕಟೀಲ್ ಸರ್ವಾನುಮತದಿಂದ...

ಬೆಂಗಳೂರು: ಕೇರಳದ ಕಾಸರಗೋಡಿನ ಯುವತಿ ಮೇಲಿನ ಅತ್ಯಾಚಾರ ಮತ್ತು ಮತಾಂತರ ಪ್ರಕರಣವನ್ನು ಸಿಐಡಿಗೆ...


Copyright 2019 www.policevarthe.com | All Right Reserved
error: Content is protected !!