Sunday, October 13 , 2019 2:01 AM

ಕ್ರೈಂ












ನಕಲಿ ಫೇಸ್​ಬುಕ್​ ಖಾತೆ ವಿರುದ್ಧ ಸುಮಲತಾ ಅಂಬರೀಷ್​ ಆಕ್ರೋಶ: ಅವರನ್ನು ಸುಮ್ಮನೇ ಬಿಡುವ ಪ್ರಶ್ನೆಯೇ ಇಲ್ಲವೆಂದ ಸಂಸದೆ



120

ಬೆಂಗಳೂರು: ನನ್ನ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಗಳನ್ನು ತೆರೆದು ಅವಹೇಳನಕಾರಿ ಪೋಸ್ಟ್​ಗಳನ್ನು ಹಾಕುತ್ತಿದ್ದಾರೆ ಎಂದು ಆರೋಪಿಸಿ ಸಂಸದೆ ಸುಮಲತಾ ಅಂಬರೀಷ್​ ಅವರು ಸೈಬರ್​ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಸಮಯದಿಂದಲೂ ನನ್ನ ವಿರುದ್ಧದ ಫೋಸ್ಟ್​ಗಳನ್ನು ಹಾಕಿ ತೊಂದರೆ ಕೊಡುತ್ತಾ ಬರುತ್ತಿದ್ದಾರೆ. ಒಂದಷ್ಟು ಪೇಜ್​ಗಳನ್ನು ನಾವು ತೆಗೆದು ಹಾಕಿಸಿದ್ದೇವೆ. ಆದರೆ, ಒಂದು ಪೇಜ್​ ಮಾತ್ರ ಬಹಳ ತಂತ್ರದಿಂದ ಆಪರೇಟ್​​​ ಮಾಡಲಾಗುತ್ತಿದೆ. ಈಗಾಗಲೇ ಹಲವು ಬಾರಿ ಎಚ್ಚರಿಕೆ ನೀಡಿದ್ದೇವೆ. ಆದರೂ ಅವರು ಎಚ್ಚೆತ್ತುಕೊಂಡಿಲ್ಲ. ಹೀಗಾಗಿ ಇದನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್​ ಆಯುಕ್ತರ ಕಚೇರಿಗೆ ಬಂದು ದೂರು ನೀಡಿದ್ದೇನೆ ಎಂದು ತಿಳಿಸಿದರು.

ಮಾಜಿ ಸಚಿವ ಡಿಕೆಶಿ ಬಂಧನ ವಿಚಾರವಾಗಿ ಪ್ರತಿಕ್ರಿಯಿಸಿ, ಈ ವಿಚಾರಕ್ಕೂ ನಮಗೂ ಸಂಬಂಧ ಇಲ್ಲ. ಹೀಗಾಗಿ ಈ ಬಗ್ಗೆ ನಾನು ಕಮೆಂಟ್​ ಮಾಡುವುದಿಲ್ಲ. ಈ ವಿಚಾರ ಏನೇ ಇದ್ದರೂ ಇ.ಡಿ.ಗೆ ಸಂಬಂಧಪಟ್ಟಿದ್ದಾಗಿದೆ. ಆದರೆ, ಈ ವಿಚಾರದಲ್ಲಿ ನನ್ನ ಹೆಸರಿಗೆ ಮಸಿ ಬಳಿಯಲು ನಕಲಿ ಫೇಸ್​ಬುಕ್​ ಖಾತೆಯಲ್ಲಿ ಕಮೆಂಟ್​ ಮಾಡಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಪೊಲೀಸ್​ ಆಯುಕ್ತರು ಭರವಸೆ ನೀಡಿದ್ದಾರೆ ಎಂದರು.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!