Sunday, October 13 , 2019 1:53 AM

ಕ್ರೈಂ












ಮಂಗಳೂರು, ನಿರಂತರ ಮಳೆಗೆ ಆವರಣ ಗೋಡೆ ಬಿದ್ದು ಇಬ್ಬರು ಮಕ್ಕಳು ಮೃತ್ಯು



1217

ಮಂಗಳೂರು: ಕರಾವಳಿಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಪಡೀಲ್‌ನ ಮನೆಯೊಂದರ ಆವರಣ ಗೋಡೆ ಬಿದ್ದು, ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರವಿವಾರ ರಾತ್ರಿ ನಡೆದಿದೆ.

ಉಪ್ಪಿನಂಗಡಿ ಮೂಲದ ಹಾಗೂ ಪ್ರಸ್ತುತ ಪಡೀಲ್‌ನ ಶಿವನಗರದ ನಿವಾಸಿ ರಾಮಣ್ಣ ಎಂಬವರ ಮಕ್ಕಳಾದ ವರ್ಷಿಣಿ (9) ಹಾಗೂ ವೇದಾಂತಿ (7) ಮೃತ ಮಕ್ಕಳು.

ರಾಮಣ್ಣ ಕಣ್ಣೂರಿನ ಸೆರಾಮಿಕ್ ಫ್ಯಾಕ್ಟರಿಯೊಂದರಲ್ಲಿ ಕಳೆದ 15 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದರು. ಇತ್ತೀಚೆಗೆ ಪಡೀಲ್‌ನಲ್ಲಿ ವಾಸವಾಗಿದ್ದರು. ಮಂಗಳೂರು ನಗರದ ಕಪಿತಾನಿಯ ಶಾಲೆಯಲ್ಲಿ ನಾಲ್ಕನೇ ತರಗತಿಯಲ್ಲಿ ವರ್ಷಿಣಿ ಹಾಗೂ ಎರಡನೇ ತರಗತಿಯಲ್ಲಿ ವೇದಾಂತಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಸೆ.9ರಂದು ಶಾಲೆಯಲ್ಲಿ ಪರೀಕ್ಷೆ ಇತ್ತು. ಪರೀಕ್ಷೆಯ ಸಿದ್ಧತೆಗಾಗಿ ಮನೆಯ ಆವರಣ ಗೋಡೆ ಸಮೀಪ ಮಕ್ಕಳು ಓದುತ್ತಿದ್ದರು. ರವಿವಾರ ರಾತ್ರಿ 7:50ರ ಸುಮಾರು ಆವರಣ ಗೋಡೆ ಬಿದ್ದಿದೆ. ಈ ವೇಳೆ ಪುಸ್ತಕ ಓದುತ್ತಿದ್ದ ಮಕ್ಕಳಿಬ್ಬರೂ ಮಣ್ಣಿನ ಕೆಳಗೆ ಸಿಲುಕಿದ್ದಾರೆ.

ತಕ್ಷಣವೇ ಗೋಡೆಯ ಅವಶೇಷಗಳಡಿ ಸಿಲುಕಿದ್ದ ಮಕ್ಕಳನ್ನು ತಂದೆ-ತಾಯಿ ಕಣ್ಣೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟರಲ್ಲಾಗಲೇ ಮಕ್ಕಳು ಮೃತಪಟ್ಟಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ಥಳಕ್ಕೆ ಕಂಕನಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

More

ಮಂಗಳೂರು: ದುಬೈನಿಂದ ಮಂಗಳೂರಿಗೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸುತ್ತಿದ್ದ ಪ್ರಯಾಣಿಕನ...

ಮಂಗಳೂರು; ಇಲ್ಲಿನ ಹೋಟೆಲ್‌ವೊಂದರ ಕೊಠಡಿಯಲ್ಲಿ ಪ್ರೇಮಿಗಳಿಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ....


ಮಂಗಳೂರು: ನಗರದ ಕಸಬಾ ಬೆಂಗ್ರೆ ಸಮೀಪದ ಅರಬ್ಭೀ ಸಮುದ್ರ ತೀರದಲ್ಲಿ ಸುಮಾರು 50...

ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮತ್ತು ಸಂಸ್ಥೆಗಳ...


ವಿಟ್ಲ; ಮರಳು ಸಾಗಾಟದ ಟಿಪ್ಪರ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ...

ಬಜಪೆ: ಇಲ್ಲಿನ ಪೆರಾರ ಕಿನ್ನಿಮಜಲು ನಾಗಬ್ರಹ್ಮ ಶಾಸ್ತ ಬಲವಂಡಿ ದೇವ ದೈವಸ್ಥಾನದಲ್ಲಿ ಚಾಕರಿ ಮಾಡುತ್ತಿದ್ದ...


ಮಂಗಳೂರು: ಭಾರತೀಯ ಅಂಚೆ ಇಲಾಖೆ ವತಿಯಿಂದ 12ನೇ ರಾಜ್ಯ ಮಟ್ಟದ ಅಂಚೆ ಚೀಟಿಗಳ...

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ, ಕಾಂಗ್ರೆಸ್‌ ಶಾಸಕ ಡಾ| ಜಿ. ಪರಮೇಶ್ವರ್‌ ಹಾಗೂ...


Copyright 2019 www.policevarthe.com | All Right Reserved
error: Content is protected !!