Thursday, November 21 , 2019 7:14 AM

ಕ್ರೈಂ












ಗಿರಿಗಿಟ್ ಚಿತ್ರದಲ್ಲಿ ನ್ಯಾಯಾಂಗ ನಿಂದನೆ, ಅವಹೇಳನ ಆರೋಪ;  ವಕೀಲರ ಸಂಘದ ಆಕ್ರೋಶ, ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ



132

ಮಂಗಳೂರು: ರಾಜ್ಯಾದ್ಯಂತ ಭಾರಿ ಸದ್ದು ಮಾಡಿದ್ದ ಗಿರಿಗಿಟ್ ತುಳು ಸಿನಿಮಾಕ್ಕೆ ಇದೀಗ ಕಂಟಕ ಎದುರಾಗಿದೆ. ಗಿರಿಗಿಟ್ ಚಿತ್ರದಲ್ಲಿ ನ್ಯಾಯಾಂಗ ನಿಂದನೆ, ವಕೀಲರ ಅವಹೇಳನ, ಆರೋಪ ಕೇಳಿ ಬಂದ ಬೆನ್ನಲ್ಲೇ ವಕೀಲರ ಸಂಘದ ಆಕ್ರೋಶ ವ್ಯಕ್ತಪಡಿಸಿದರು. ಈ ಪರಿಣಾಮವಾಗಿ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆಯನ್ನು  ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರ ಆದೇಶದ ಬೆನ್ನಲ್ಲೇ ಮಂಗಳೂರು ವಕೀಲರ ಸಂಘದ ವತಿಯಿಂದ ಸುದ್ದಿಗೋಷ್ಠಿ ನಡೆಯಿತು .

ಗಿರಿಗಿಟ್ ತುಳು ಚಲನಚಿತ್ರಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ ಆದೇಶ‌ದ ಕುರಿತು ಹರ್ಷ ವ್ಯಕ್ತಪಡಿಸಿರುವ ಮಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ. ರಾಘವೇಂದ್ರ ಅವರು ಇಂತಹ ಮಾನ ಹಾನಿಕರ ಸನ್ನಿವೇಶಗಳ ಚಿತ್ರೀಕರಣದ ಬಗ್ಗೆ ಮಂಗಳೂರು ವಕೀಲರ ಸಂಘವು ತೀವ್ರ ಹೋರಾಟ ನಡೆಸುವುದಾಗಿ ಮಾತ್ರವಲ್ಲದೇ ಮುಂದೆ ಇತಂಹ ಎಲ್ಲಿಯೂ ನಡೆಯಬಾರದು. ವಕೀಲರ ಬಗ್ಗೆ ಮತ್ತು ನ್ಯಾಯಾಧೀಶರ ಬಗ್ಗೆ ಈ ರೀತಿಯಾಗಿ ಅಪಹಾಸ್ಯ ಮಾಡುವುದು ಸರಿಯಲ್ಲ ಎಂದು ಅವರು ತಿಳಿಸಿದರು. ಈ ಸಂದರ್ಭದಲ್ಲಿ ವಕೀಲರ ಸಂಘದ ಅಧ್ಯಕ್ಷರಾದ ಎನ್. ನರಸಿಂಹ ಹೆಗ್ಡೆ, ಉಪಾಧ್ಯಕ್ಷರಾದ  ಜಿನೇಂದ್ರ ಕುಮಾರ್, ಜೊತೆ ಕಾರ್ಯದರ್ಶಿ ಶರ್ಮಿಳಾ, ಕೋಶಾಧಿಕಾರಿ ಅರುಣಾ ಬಿ.ಪಿ. ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

ಪ್ರಕರಣದ ಸಾರಾಂಶ; ಚಿತ್ರದಲ್ಲಿ ನ್ಯಾಯಾಂಗ ಮತ್ತು ವಕೀಲರಿಗೆ ಅವಮಾನ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ವಕೀಲರ ಸಂಘ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಲಯ ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದೆ. ವಕೀಲರ ಸಂಘದ ಪರವಾಗಿ ಹಿರಿಯ ವಕೀಲ ಎಂ.ಪಿ ಶೆಣೈ ವಾದ ಮಂಡಿಸಿದ್ದು, ಕಿರಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಹರೀಶ್ ಅವರು ಚಿತ್ರ ಪ್ರದರ್ಶನಕ್ಕೆ ತಡೆಯಾಜ್ಞೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದೆ. ಕುಗ್ಗ ಸಾಹೇಬ್...

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಹಣಕಾಸು...


ಬೆಂಗಳೂರು : ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನ...


ಮಂಗಳೂರು: ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ...

ಮಂಗಳೂರು; ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು...


ಮಂಗಳೂರು ಮಹಾನಗರ ಪಾಲಿಕೆ _2019 ಫಲಿತಾಂಶAd code after FIRST paragraph...

ಮಂಗಳೂರು ಮಹಾನಗರ ‌ಪಾಲಿಕೆ ಚುನಾವಣೆ; 56ನೇ ವಾರ್ಡ್ ನಲ್ಲಿ ಬಿಜೆಪಿ ಜಯಭೇರಿAd...


Copyright 2019 www.policevarthe.com | All Right Reserved
error: Content is protected !!