ಭಟ್ಕಳ: ಖಾಸಗಿ ಶಾಲಾ ಬಸ್ಸೊಂದು ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಬಸ್ ಚಾಲಕ ಮತ್ತು ಮಹಿಳಾ ಸಿಬ್ಬಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಗಾಯಾಳುಗಳನ್ನು ಮೊಹಮ್ಮದ್ ಇಶಾಮ್(22) ಮತ್ತು ಶೆಹನಾಜ್ ಫಯಾಜ್ (24) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳನ್ನು ಮನೆಗೆ ಬಿಟ್ಟು ವಾಪಾಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಾಲಾ ಬಸ್ಸಿನ ಚಾಲಕ ಮತ್ತೊಂದು ವಾಹನವನ್ನು ಹಿಂದಿಕ್ಕಲು ಪ್ರಯತ್ನ ನಡೆಸಿದಾಗ ಎದುರಿನಿಂದ ಬಂದ ಲಾರಿಗೆ ಢಿಕ್ಕಿ ಹೊಡೆದಿದ ಪರಿಣಾಮ ಈ ಅಪಘಾತ ಸಂಭವಿಸಿರುವುದಾಗಿದೆ.