ಮಂಗಳೂರು: ಡ್ರಗ್ಸ್ ಸೇವನೆ ಮತ್ತು ಮಾರಾಟಕ್ಕೆ ಸಂಬಂಧಿಸಿದ ಹಾಗೆ ಎರಡು ಪ್ರತ್ಯೇಕ ಘಟನೆಗಳನ್ನು ಬೇಧಿಸಿರುವ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ವೈಶಾಕ್, ಅರವಿಂದ್, ಇಸ್ಮಾಯಿಲ್ ಸೊಹೈಲ್ ಅವರೇ ಬಂಧಿತ ಆರೋಪಿಗಳು.
ಆರೋಪಿ ವೈಶಾಕ್ ಉಳ್ಳಾಲದ ಮೊಗವೀರಪಟ್ಟ ಬೀಚ್ ಪರಿಸರದಲ್ಲಿ ನಿಷೇಧಿತ ಡ್ರಗ್ಸ್ ಸೇವಿಸಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಗೆಯೇ ಇನ್ನೊಂದು ಪ್ರಕರಣದಲ್ಲಿ ಜಪ್ಪಿನ ಮೊಗರಿನ ಕುಡ್ಜಾಡಿ ರೈಲ್ವೆ ಅಂಡರ್‌ಪಾಸಿನ ಸೂಟರ್‌ಪೇಟೆ ರಸ್ತೆಯಲ್ಲಿ ನಿಷೇಧಿತ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಅರವಿಂದ್‌ನನ್ನು ವಶಕ್ಕೆ ಪಡೆಯಲಾಗಿದೆ. ಆತನಿಂದ 1. 45 ಗ್ರಾಂ ತೂಕದ ಎಂಜಿಎಂ, ಬ್ಯಾಟರಿ ಚಾಲಿತ ತೂಕ ಯಂತ್ರ ಸೇರಿದಂತೆ ಹಲವು ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತಿದ್ದ ಪೆಡ್ಲರ್ ಸುಹೈನ್‌ನನ್ನು ಪೊಲೀಸರು ಬಂಧಿಸಿದ್ದಾರೆ.