Thursday, November 21 , 2019 6:33 AM

ಕ್ರೈಂ












ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ



33

ಬೆಂಗಳೂರು: ಖ್ಯಾತ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ (70) ವಯೋಸಹಜ ಅನಾರೋಗ್ಯದಿಂದ ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕದ್ರಿಯವರು ಮಂಗಳೂರು  ಎ.ಜೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ವಿಶ್ವವಿಖ್ಯಾತ ಸ್ಯಾಕ್ಸೊಫೋನ್ ವಾದಕರಾದ ಗೋಪಾಲನಾಥ್‌ರವರು ಹುಟ್ಟಿದ್ದು ದಕ್ಷಿಣ ಕನ್ನಡ ಜಿಲ್ಲೆಯ ಪಾಣಿ ಮಂಗಳೂರಿನಲ್ಲಿ. ತಂದೆ ತನಿಯಪ್ಪ ನಾಗಸ್ವರ ವಿದ್ವಾಂಸರು.  ಆಕಾಶವಾಣಿ ‘ಎ’ ಟಾಪ್ ಶ್ರೇಣಿಯ ಕಲಾವಿದರಾಗಿದ್ದರು.

ವಿದೇಶಿ ವಾದ್ಯವನ್ನು ಸಂಪೂರ್ಣವಾಗಿ ತನ್ನದಾಗಿಸಿಕೊಂಡು , ಅದಕ್ಕೆ ಭಾರತೀಯ ಸಂಗೀತವನ್ನು ಕರಗತ ಮಾಡಿಸಿದವರಲ್ಲಿ ಕದ್ರಿ ಗೋಪಾಲನಾಥರು ಪ್ರಮುಖರು. ಬಾಲ್ಯದಿಂದಲೂ ಸಂಗೀತದಲ್ಲಿ ಒಲವು ಬೆಳೆಸಿಕೊಂಡ ಅವರಿಗೆ ತಂದೆಯೇ ಗುರುವಾಗಿದ್ದರು.

ಭಾರತ ಸರ್ಕಾರದ ಪದ್ಮಶ್ರೀ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ತಮಿಳುನಾಡು ಸರಕಾರದ ಕಲೈಮಾಮಣಿ, ಕರ್ನಾಟಕ ಕಲಾಶ್ರೀ, ಗಾನಕಲಾ ಭೂಷಣ, ನಾದ ಗಂಧರ್ವ, ನಾದೋಪಾಸನ ಬ್ರಹ್ಮ ಸುನಾದ, ನಾದಕಲಾ ರತ್ನ, ನಾದಕಲಾನಿಧಿ, ಸಂಗೀತ ವಿದ್ಯಾರತ್ನ, ಸಂಗೀತ ರತ್ನ, ಶೃಂಗೇರಿ – ಮಂತ್ರಾಲಯ – ಅಹೋಬಿಲ ಮುಂತಾದ ಪೀಠಗಳಿಂದ ಸನ್ಮಾನ, ಕಂಚಿ ಕಾಮಕೋಠಿ ಆಸ್ಥಾನ ವಿದ್ವಾನ್, ಬೆಂಗಳೂರು ವಿಶ್ವವಿದ್ಯಾಲಯದ ಡಾಕ್ಟರೇಟ್ ಮುಂತಾದ ಅನೇಕ ಪ್ರಶಸ್ತಿ ಗೌರವಗಳು ಕದ್ರಿ ಗೋಪಾಲನಾಥರನ್ನು ಅರಸಿಬಂದಿವೆ.

ಪತ್ನಿ ಮತ್ತು ಪುತ್ರ ಸಂಗೀತ ನಿರ್ದೇಶಕ ಮಣಿಕಾಂತ್ ಕದ್ರಿ ಸೇರಿದಂತೆ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು ಪದವಿನಂಗಡಿ ಮನೆಯಲ್ಲಿ ಇಂದು ಅಂತ್ಯಸಂಸ್ಕಾರ ನಡೆಯಲಿದೆ ಎಂದು ಮನೆಯವರು ತಿಳಿಸಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಪುತ್ತೂರು: ಇಲ್ಲಿನ ಕುರಿಯ ಅಜಲಾಡಿಯಲ್ಲಿ ಜೋಡಿ ಕೊಲೆ ನಡೆದಿದೆ. ಕುಗ್ಗ ಸಾಹೇಬ್...

ನವದೆಹಲಿ: ಐಎನ್ ಎಕ್ಸ್ ಮೀಡಿಯಾ ಪ್ರಕರಣದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಹಣಕಾಸು...


ಬೆಂಗಳೂರು : ಮಾಜಿ ಸಚಿವ ಹಾಗೂ ಶಾಸಕ ತನ್ವೀರ್ ಸೇಠ್ ಅವರ ಮೇಲೆ...

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಫೇಲ್ ಯುದ್ಧ ವಿಮಾನ...


ಮಂಗಳೂರು: ಕೆರೆಯಲ್ಲಿ ಈಜಾಡುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ದಕ್ಷಿಣ...

ಮಂಗಳೂರು; ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು...


ಮಂಗಳೂರು ಮಹಾನಗರ ಪಾಲಿಕೆ _2019 ಫಲಿತಾಂಶAd code after FIRST paragraph...

ಮಂಗಳೂರು ಮಹಾನಗರ ‌ಪಾಲಿಕೆ ಚುನಾವಣೆ; 56ನೇ ವಾರ್ಡ್ ನಲ್ಲಿ ಬಿಜೆಪಿ ಜಯಭೇರಿAd...


Copyright 2019 www.policevarthe.com | All Right Reserved
error: Content is protected !!