Monday, December 9 , 2019 4:11 PM

ಕ್ರೈಂ












ಸುಪ್ರೀಂ ತೀರ್ಪು; 17 ಶಾಸಕರ ಅನರ್ಹತೆ ಸರಿ, ಸದ್ಯಕ್ಕಿಲ್ಲ ಮಂತ್ರಿಗಿರಿ!



44

ನವದೆಹಲಿ: ಹದಿನೇಳು ಮಂದಿ ಅನರ್ಹ ಶಾಸಕರಿಗೆ ಸಂಬಂಧಿಸಿದಂತೆ ಅಂದಿನ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಪೀಠ ಬುಧವಾರ ಎತ್ತಿಹಿಡಿದಿದ್ದು, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸಬಹುದು ಎಂದು ತೀರ್ಪು ನೀಡಿದೆ.

ರಾಜ್ಯ ಉಪಚುನಾವಣೆಯ ಹಿನ್ನೆಲೆಯಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಅನರ್ಹ ಶಾಸಕರ ಪ್ರಕರಣಕ್ಕೆ ತೆರೆ ಬಿದ್ದಂತಾಗಿದೆ. 2023ರವರೆಗೆ ಅನರ್ಹ ಶಾಸಕರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಎಂಬ ಸ್ಪೀಕರ್ ಆದೇಶವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ರಾಜೀನಾಮೆ ಸ್ವೀಕರಿಸುವುದಷ್ಟೇ ಸ್ಪೀಕರ್ ಕೆಲಸ ಎಂದು ಸುಪ್ರೀಂ ಪೀಠ ಸ್ಪಷ್ಟಪಡಿಸಿದೆ.

ಶಾಸಕರ ಅನರ್ಹತೆಗೆ ಅವಧಿ ನಿರ್ಧಾರ ಮಾಡುವಂತಿಲ್ಲ. ಅನರ್ಹತೆ ಕೇವಲ ಉಪಚುನಾವಣೆ ನಡೆಯುವವರೆಗೆ ಮಾತ್ರ. ವಿಧಾನಸಭೆ ಅವಧಿ ಮುಗಿಯುವವರೆಗೆ ಅಲ್ಲ. ಅನರ್ಹ ಶಾಸಕರು ಉಪಚುನಾವಣೆಗೆ ಸ್ಪರ್ಧಿಸಬಹುದು. ಆದರೆ ಚುನಾವಣೆಗೆ ಸ್ಪರ್ಧಿಸುವವರೆಗೆ ಮಂತ್ರಿಯಾಗುವಂತಿಲ್ಲ. ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ನಂತರ ಮಂತ್ರಿಯಾಗಬಹುದು ಎಂದು ತೀರ್ಪಿನಲ್ಲಿ ಹೇಳಿದೆ. ಚುನಾವಣೆ ಸ್ಪರ್ಧೆಗೆ ಸ್ಪೀಕರ್ ನಿರ್ಬಂಧ ತಪ್ಪು. ಶಾಸಕರ ರಾಜೀನಾಮೆ ಸ್ವಯಂ ಪ್ರೇರಿತವಾಗಿದ್ದರೆ ಅದನ್ನು ಒಪ್ಪಬೇಕು. ಶಾಸಕರ ರಾಜೀನಾಮೆ ಅಂಗೀಕರಿಸಬೇಕು. ರಾಜೀನಾಮೆ ಅಂಗೀಕರಿಸಲಿ ಅಥವಾ ಅನರ್ಹಗೊಳಿಸಲಿ ಶಾಸಕ ಸ್ಥಾನ ಖಾಲಿಯಾಗುತ್ತದೆ. ಆಗ ಚುನಾವಣೆ ನಡೆಯಲೇಬೇಕಾಗುತ್ತದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owener & Chief Editor Policevarthe.com Crime Website

More

ಮಂಗಳೂರು; ಬಲ್ಮಠ ಬೆಂದೂರ್ ವೆಲ್ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್​​ವೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ...

ಮಂಗಳೂರು; ತಂದೆ ಮಗನ ನಡುವೆ ಜಗಳ ಉಂಟಾಗಿ ಮಗ ತಂದೆಯನ್ನೇ ಹತ್ಯೆಗೈದಿರುವ ಘಟನೆ...


ಮಂಗಳೂರು; ಕಾಸರಗೋಡಿನ ಸುದರ್ಶನ್ ಎಂಬುವರನ್ನು ತೊಕ್ಕೊಟ್ಟುವಿನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ...

ಮಂಗಳೂರು; ಕೃಷಿ ಬೆಳೆಗಳನ್ನು ನಾಶ ಮಾಡುವ ಪ್ರಾಣಿಗಳನ್ನು ಕೊಲ್ಲಲು ಬಳಸುವ ಸ್ಫೋಟಕ ತಯಾರಿಸುತ್ತಿದ್ದ...


ಮಂಗಳೂರು; ಲೈಟ್‌ ಫಿಶಿಂಗ್‌, ಬುಲ್‌ಟ್ರಾಲ್‌ ಸೇರಿದಂತೆ ಅಕ್ರಮ ಮೀನುಗಾರಿಕೆಯಲ್ಲಿ ತೊಡಗಿರುವ ಬೋಟ್‌ಗಳ ವಿರುದ್ಧ...

ಹೈದರಾಬಾದ್: ಎನ್ ಕೌಂಟರ್ ಸ್ಪೆಷಲಿಸ್ಟ್ ವಿಶ್ವನಾಥ್ ಸಜ್ಜನರ ಮೂಲತಃ ಹುಬ್ಬಳ್ಳಿಯ ಪಗಣಿ...


ಹೈದರಾಬಾದ್: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ದಿಶಾ ಸಾಮೂಹಿಕ ಅತ್ಯಾಚಾರ, ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಎಲ್ಲಾ ಆರೋಪಿಗಳನ್ನು ಎನ್ ಕೌಂಟರ್ ನಲ್ಲಿ...

ಹೈದರಾಬಾದ್ : ದೇಶವನ್ನೆ ತಲ್ಲಣಗೊಳಿಸಿದ್ದ ದಿಶಾ ಅತ್ಯಾಚಾರ, ಕೊಲೆ ಪ್ರಕರಣ ಸಂಬಂಧಿಸಿದಂತೆ...


Copyright 2019 www.policevarthe.com | All Right Reserved
error: Content is protected !!