ಮಂಗಳೂರು, ಕೊರೋನ ಸೋಂಕಿತ ಆಸ್ಪತ್ರೆಯಿಂದ ಪರಾರಿ; ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆರೋಪಿ - Karnataka Crime News: Latest Crime Headlines | Police Varthe
Tuesday, August 3 , 2021 7:00 AM

ಕ್ರೈಂ
ಮಂಗಳೂರು, ಕೊರೋನ ಸೋಂಕಿತ ಆಸ್ಪತ್ರೆಯಿಂದ ಪರಾರಿ; ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಆರೋಪಿ5426

ಮಂಗಳೂರು; ನಗರದ ವೆನ್ ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೊರೊನಾ ಪಾಸಿಟಿವ್ ರೋಗಿ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿರುವ ಘಟನೆ ನಡೆದಿದೆ. ಮೂಲತಃ ಪುತ್ತೂರು, ದರ್ಬೆ ನಿವಾಸಿ (ಮಂಗಳೂರಿನ ಅಜ್ಜಿ ಮನೆಯಲ್ಲಿ ವಾಸ್ತವ್ಯ) ದೇವರಾಜು(18) ಎಂಬಾತ ಆಸ್ಪತ್ರೆಯಿಂದ ತಪ್ಪಿಸಿಕೊಂಡು ಹೋಗಿರುವ ರೋಗಿಯಾಗಿದ್ದಾನೆ.

ಘಟನೆಯ ಸಾರಾಂಶ; ನಗರದ ಕೋವಿಡ್(ವೆನ್ ಲಾಕ್) ಆಸ್ಪತ್ರೆಗೆ ಸ್ವಇಚ್ಛೆಯಿಂದ ಜುಲೈ 1ರಂದು ಕೋವಿಡ್ 19 ರೋಗ ಲಕ್ಷಣಗಳು ಇದೆ ಎಂಬ ಕಾರಣ ಆಸ್ಪತ್ರೆ ಬಂದ ದೇವರಾಜು ಎಂಬ ವ್ಯಕ್ತಿಯನ್ನು ವಾರ್ಡ್ ಒಂದರಲ್ಲಿ ದಾಖಲಿಸಿಕೊಂಡು ವೈದ್ಯರು ಚಿಕಿತ್ಸೆ ನೀಡುತ್ತಿದ್ದರು. ಇಂದು ಈತನಿಗೆ ಕೋವಿಡ್ 19 ದೃಢ ಪಟ್ಟಿರುವ ವರದಿ ಬಂದ ನಂತರ ಸುಮಾರು 4 ಗಂಟೆಯ ಸಮಯ ವೆನ್ ಲಾಕ್ ಆಸ್ಪತ್ರೆಯ ಕೋವಿಡ್ ಬ್ಲಾಕ್ ನಿಂದ ತಪ್ಪಿಸಿಕೊಂಡು ಹೋಗಿದ್ದಾನೆ.

ಈ ಬಗ್ಗೆ ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಪತ್ತೆಗಾಗಿ ಪೊಲೀಸರು ಹುಡುಕಾಟ ಪ್ರಾರಂಭಿಸಿದ್ದಾರೆ. ಈತನ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ತಿಳಿದರೆ ಮತ್ತು ಎಲ್ಲಿಯಾದರೂ ಕಂಡು ಬಂದರೆ ನಗರ ಪೊಲೀಸ್ ಕಂಟ್ರೋಲ್ ನಂಬರ್ 9480802300 ಹಾಗೂ ಪಾಂಡೇಶ್ವರ ಪೊಲೀಸ್ ಠಾಣಾ 0824 2220530 ಈ ನಂಬರ್ ಗೆ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ಷೀಣವಾಗಿ ಆರಂಭಗೊಂಡಿದ್ದ ಮುಂಗಾರು ಮಳೆ ಇದೀಗ...

ಮಂಗಳೂರು: ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಮನೆಗೆ ಪುಂಜಾಲಕಟ್ಟೆ...


ಸುಳ್ಯ: ಕೊಡಗು ಗಡಿ ಭಾಗದಲ್ಲಿ ಬರುವ ಅರಣ್ಯ ಇಲಾಖೆಯ ಚೆಕ್ ಪೋಸ್ಟ್​​​ನಲ್ಲಿ, ಹಣ...

ಮಂಗಳೂರು: ಕೊರೊನಾ ಲಾಕ್​​ಡೌನ್ ಮಾರ್ಗಸೂಚಿಯಂತೆ ಮದುವೆಗೆ ಅನುಮತಿ ಪಡೆದು, ವಿವಾಹದ ಮುನ್ನ ಮೆಹಂದಿ...


ಮಂಗಳೂರು : ಮೀನಿನ ಕಂಟೈನರ್ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ 200 ಕೆಜಿ ಗಾಂಜಾವನ್ನು...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ಕಳೆದ ಸುಮಾರು ಮೂರು...


ಮಂಗಳೂರು:  ತೌಕ್ತೆ ಚಂಡಮಾರುತ ಕಾಣಿಸಿಕೊಂಡ ಪರಿಣಾಮ ಮಂಗಳೂರಿನಲ್ಲಿ ಸಮುದ್ರ ಪ್ರಕ್ಷುಬ್ಧಗೊಂಡಿದೆ. ತೌಕ್ತೆ...

ಮಂಗಳೂರು; ನದಿಯಿಂದ ಮರಳನ್ನು ತೆಗೆದು ಕಳ್ಳತನ ಮಾಡಿ ಸಾಗಾಟ ಮಾಡುತ್ತಿದ್ದ ಸ್ಥಳಕ್ಕೆ...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!