ಸ್ಟಾರ್ ನಟ ವಿಜಯ್ ಮನೆಗೆ ಬಾಂಬ್ ಇಟ್ಟಿದ್ದೇವೆ!  ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಿಕ ವ್ಯಕ್ತಿಯ ಕರೆ!  - Karnataka Crime News: Latest Crime Headlines | Police Varthe
Thursday, May 6 , 2021 4:02 PM

ಕ್ರೈಂ
ಸ್ಟಾರ್ ನಟ ವಿಜಯ್ ಮನೆಗೆ ಬಾಂಬ್ ಇಟ್ಟಿದ್ದೇವೆ!  ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಿಕ ವ್ಯಕ್ತಿಯ ಕರೆ! 318

ಚೆನ್ನೈ: ತಮಿಳು ಸಿನಿಮಾ ಪ್ರೇಮಿಗಳ ಕಾಲಿವುಡ್ ಸೂಪರ್ ಸ್ಟಾರ್ ದಳಪತಿ ವಿಜಯ್ ಮನೆಗೆ ಬಾಂಬ್ ಇಡಲಾಗಿದೆ ಎಂದು ಭಾನುವಾರ ಮಧ್ಯರಾತ್ರಿ ಚೆನ್ನೈ ಪೊಲೀಸ್ ಕಂಟ್ರೋಲ್ ರೂಂಗೆ ಕರೆಯೊಂದು ಬಂದಿರುವುದಾಗಿ ವರದಿ ತಿಳಿಸಿದೆ. ಚೆನ್ನೈನ ಸಾಲಿಗ್ರಾಮಂನಲ್ಲಿರುವ ನಟ ವಿಜಯ್ ಅವರ ಮನೆಗೆ ಬಾಂಬ್ ಇಡಲಾಗಿದೆ ಎಂದು ಪೊಲೀಸ್ ಕಂಟ್ರೋಲ್ ರೂಂಗೆ ಅನಾಮಿಕ ವ್ಯಕ್ತಿಯೊಬ್ಬ ಕರೆ ಮಾಡಿದ್ದ. ಕೊನೆಗೂ ಆ ಕರೆಯನ್ನು ಪತ್ತೆಹಚ್ಚಿದ್ದು, ಮಾನಸಿಕ ಅಸ್ವಸ್ಥ ವ್ಯಕ್ತಿಯೊಬ್ಬ ಈ ಕರೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಾನಸಿಕ ಅಸ್ವಸ್ಥ ಯುವಕನೊಬ್ಬ ಹುಸಿ ಬೆದರಿಕೆ ಕರೆ ಮಾಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಕಂಟ್ರೋಲ್ ರೂಂನಲ್ಲಿ ಕರೆ ಸ್ವೀಕರಿಸಿದ ತಕ್ಷಣವೇ ಪೊಲೀಸ್ ತಂಡ ಹಾಗೂ ಬಾಂಬ್ ಪತ್ತೆ ದಳ ವಿಜಯ್ ಮನೆಗೆ ದೌಡಾಯಿಸಿತ್ತು. ಮನೆಯ ಒಳಗೆ, ಸುತ್ತಮುತ್ತ ಹೀಗೆ ಎಲ್ಲೆಡೆ ಕೂಲಂಕಷವಾಗಿ ಪರಿಶೀಲಿಸಿದಾಗ ಬಾಂಬ್ ಪತ್ತೆಯಾಗಿಲ್ಲವಾಗಿತ್ತು.

ನಂತರ ದೂರವಾಣಿ ಕರೆ ಪತ್ತೆ ಹಚ್ಚಿದ್ದು, ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಮರಕ್ಕಾನಂ ಎಂಬಲ್ಲಿಂದ ಮಾನಸಿಕ ಅಸ್ವಸ್ಥ ಯುವಕ ಹುಸಿ ಬೆದರಿಕೆ ಕರೆ ಮಾಡಿರುವುದಾಗಿ ತಿಳಿದು ಬಂದಿತ್ತು ಎಂದು ವರದಿ ತಿಳಿಸಿದೆ.21 ವರ್ಷದ ಮಾನಸಿಕ ಅಸ್ವಸ್ಥ ಯುವಕನ ಮನೆಯವರನ್ನು ಕರೆಯಿಸಿ ಎಚ್ಚರಿಕೆ ಕೊಟ್ಟು ಕಳುಹಿಸಲಾಗಿದೆ. ಯುವಕನಿಗೆ ಈ ರೀತಿ ಪ್ರತಿಷ್ಠಿತ ವಿಐಪಿಗಳಿಗೆ ಹುಸಿ ಬೆದರಿಕೆ ಕರೆ ಮಾಡುವ ಚಟ ಇದ್ದಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ...

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ...


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಗಳೂರು ಪೂರ್ವ ಪೊಲೀಸ್...

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ...


ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಚಂದನ್ ಪಟೇಲ್ ಮತ್ತೆ...

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ...


ಮಂಗಳೂರು: ನಗರದ ಪಂಪ್ ವೆಲ್ ಫ್ಲೈಓವರ್ ಗೋಡೆಯ ಮೇಲೆ ಸೇರಿದಂತೆ ನಗರದ...

ಮಂಗಳೂರು; ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!