ಐಶ್ವರ್ಯ ರೈ, ಮಗಳು ಆರಾಧ್ಯಗೂ ಕೋವಿಡ್ ಪಾಸಿಟಿವ್ - Karnataka Crime News: Latest Crime Headlines | Police Varthe
Thursday, May 6 , 2021 3:30 PM

ಕ್ರೈಂ












ಐಶ್ವರ್ಯ ರೈ, ಮಗಳು ಆರಾಧ್ಯಗೂ ಕೋವಿಡ್ ಪಾಸಿಟಿವ್



438

ಮುಂಬೈ: ಬಾಲಿವವುಡ್ ಬಿಗ್ ಬಿ ಅಮಿತಾಭ್ ಬಚ್ಚನ್, ಪುತ್ರ ಅಭಿಷೇಕ್ ಬಚ್ಚನ್ ಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾದ ನಂತರ ಇದೀಗ ಐಶ್ವರ್ಯ ರೈ ಮತ್ತು ಮಗಳು ಆರಾಧ್ಯ ಗೂ ಕೋವಿಡ್ 19 ಸೋಂಕು ದೃಢವಾಗಿದೆ. ಮಹಾರಾಷ್ಟ್ರ ಸರಕಾರದ ಆರೋಗ್ಯ ಸಚಿವ ರಾಜೇಶ್ ಟೋಪೆ ಈ ಬಗ್ಗೆ ಟ್ವೀಟ್ ಮಾಡಿದ್ದು, ಐಶ್ವರ್ಯ ರೈ ಬಚ್ಚನ್ ಮತ್ತು ಮಗಳು ಆರಾಧ್ಯ ಅಭಿಷೇಕ್ ಬಚ್ಚನ್ ಗೆ ಕೋವಿಡ್ 19 ಸೋಂಕು ದೃಢವಾಗಿದೆ. ಜಯ ಬಚ್ಚನ್ ಅವರ ವರದಿ ನೆಗೆಟಿವ್ ಆಗಿದೆ. ಬಚ್ಚನ್ ಕುಟುಂಬವು ಶೀಘ್ರ ಗುಣಮುಖವಾಗುವಂತೆ ನಾವೆಲ್ಲ ಪ್ರಾರ್ಥಿಸುವ ಎಂದು ಹೇಳಿದ್ದಾರೆ.

ಬೃಹನ್ ಮುಂಬೈ ನಗರ ಪಾಲಿಕೆಯ ಉಪ ಆಯುಕ್ತ ಸುರೇಶ್ ಕಕಾನಿ ಈ ಬಗ್ಗೆ ಮಾಹಿತಿ ನಿಡಿದ್ದು, ಬಚ್ಚನ್ ಮನೆಯ ಕೆಲಸದವರನ್ನೂ ಸೇರಿಸಿ 16 ಜನರನ್ನು ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಕೆಲವು ವರದಿ ಇನ್ನು ಕೈ ಸೇರಬೇಕಿದೆ. ಐಶ್ವರ್ಯ ರೈ ಮತ್ತು ಆರಾಧ್ಯ ಅವರಿಗೆ ಯಾವುದೇ ಕೋವಿಡ್ ಸೋಂಕು ಲಕ್ಷಣಗಳಿಲ್ಲ. ಒಂದು ವೇಳೆ ಅವರು ಬಯಸಿದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುವುದು, ಇಲ್ಲದಿದ್ದರೆ ಮನೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುವುದು ಎಂದಿದ್ದಾರೆ.

ಅಮಿತಾಬ್ ಬಚ್ಚನ್ ಅವರ ನಿವಾಸವನ್ನು ಸ್ಯಾನಿಟೈಸ್ ಮಾಡಲಾಗಿದೆ. ಬಚ್ಚನ್ ನಿವಾಸಕ್ಕೆ ಯಾರಿಗೂ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ. ಈ ಪ್ರದೇಶವನ್ನು ಕಂಟೈನ್ ಮೆಂಟ್ ಏರಿಯಾ ಎಂದು ಘೋಷಿಸಲಾಗಿದೆ. ಅಮಿತಾಬ್ ಬಚ್ಚನ್ ಅವರಿಗೆ ಶನಿವಾರ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿದೆ. ಸೋಂಕು ಲಕ್ಷಣಗಳು ಕಂಡುಬಂದ ಹಿನ್ನಲೆಯಲ್ಲಿ ಅವರು ಸ್ವತಃ ಕೋವಿಡ್ ಪರೀಕ್ಷಗೆ ಒಳಗಾಗಿದ್ದರು. ನಂತರ ರಾತ್ರಿ ಅಭಿಷೇಕ್ ಬಚ್ಚನ್ ಅವರಿಗೂ ಕೋವಿಡ್ 19 ಸೋಂಕು ದೃಢವಾಗಿತ್ತು. ಇಬ್ಬರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ...

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ...


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಗಳೂರು ಪೂರ್ವ ಪೊಲೀಸ್...

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ...


ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಚಂದನ್ ಪಟೇಲ್ ಮತ್ತೆ...

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ...


ಮಂಗಳೂರು: ನಗರದ ಪಂಪ್ ವೆಲ್ ಫ್ಲೈಓವರ್ ಗೋಡೆಯ ಮೇಲೆ ಸೇರಿದಂತೆ ನಗರದ...

ಮಂಗಳೂರು; ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!