ರಾಜ್ಯ ಸರ್ಕಾರ ಐ.ಸಿ.ಯುನಲ್ಲಿದೆ ರಾಜ್ಯದ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿ; ಸಿದ್ದರಾಮಯ್ಯ - Karnataka Crime News: Latest Crime Headlines | Police Varthe
Thursday, May 6 , 2021 4:23 PM

ಕ್ರೈಂ












ರಾಜ್ಯ ಸರ್ಕಾರ ಐ.ಸಿ.ಯುನಲ್ಲಿದೆ ರಾಜ್ಯದ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿ; ಸಿದ್ದರಾಮಯ್ಯ



111

ಬೆಂಗಳೂರು; ರಾಜ್ಯ ಸರ್ಕಾರ ಐ.ಸಿ.ಯು ನಲ್ಲಿದೆ, ರಾಜ್ಯದ ಮುಖ್ಯಮಂತ್ರಿ ಆಸ್ಪತ್ರೆಯಲ್ಲಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕೊರೊನಾ ನಿಯಂತ್ರಿಸದ ಸರ್ಕಾರದ ಕಾರ್ಯವೈಖರಿ ಬಗ್ಗೆ ಮಾತಿನೇಟು ನೀಡಿದ್ದಾರೆ. ಈ ಬಗ್ಗೆ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ರಾಜ್ಯ ಸರ್ಕಾರದ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ್ದು, ಕೊರೊನಾದಿಂದ ರಕ್ಷಿಸಿಕೊಳ್ಳಲು ಜನತೆಗೆ ನಿಯಮ-ನಿರ್ಬಂಧ-ಮಾರ್ಗಸೂಚಿಗಳ ಉಪದೇಶ ಮಾಡುವುದರ ಜೊತೆಗೆ ಕೊರೊನಾ ಎದುರಿಸಲು ಸರ್ಕಾರ ಏನು‌ ಮಾಡಿದೆ‌ ಎನ್ನುವುದನ್ನು ಜನತೆಗೆ ತಿಳಿಸಲು ತಕ್ಷಣ ಶ್ವೇತಪತ್ರ ಹೊರಡಿಸಬೇಕು.

ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಮಾರಣಾಂತಿಕವಾಗುತ್ತಿದ್ದು, ಸೋಂಕು ಹರಡುವುದನ್ನು ತಡೆಯಲಿಕ್ಕಾಗದ ರಾಜ್ಯ ಸರ್ಕಾರ ಜನತೆಯ ಮುಂದೆ ಬೆತ್ತಲಾಗುತ್ತಿದೆ. ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳುವ ವಿಫಲ ಪ್ರಯತ್ನದಲ್ಲಿ ತೊಡಗಿದೆ ಎಂದು ಹೇಳಿದ್ದಾರೆ.” ಕೊರೊನಾ ಸೋಂಕಿತರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳಿಲ್ಲ,‌ ಖಾಸಗಿ ಆಸ್ಪತ್ರೆಗಳ ದುಬಾರಿ ಶುಲ್ಕ ತೆರುವ ಶಕ್ತಿ ಜನರಿಗೆ ಇಲ್ಲ. ಆಮ್ಲಜನಕದ ದಾಸ್ತಾನಿಲ್ಲ,‌ ರೆಮಿಡಿಸಿವಿರ್ ನಂತಹ ಜೀವರಕ್ಷಕ ಔಷಧಿಯ‌ ಕೊರತೆ ಇದೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ...

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ...


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಗಳೂರು ಪೂರ್ವ ಪೊಲೀಸ್...

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ...


ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಚಂದನ್ ಪಟೇಲ್ ಮತ್ತೆ...

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ...


ಮಂಗಳೂರು: ನಗರದ ಪಂಪ್ ವೆಲ್ ಫ್ಲೈಓವರ್ ಗೋಡೆಯ ಮೇಲೆ ಸೇರಿದಂತೆ ನಗರದ...

ಮಂಗಳೂರು; ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!