ಉಪ್ಪಿನಂಗಡಿ ಎಟಿಎಂ ಮಷಿನ್, ಸಿಸಿಟಿವಿಗಳ ಜಖಂ ಮಾಡಿ ಕಳ್ಳತನಕ್ಕೆ ಯತ್ನ!: ಆರೋಪಿಯ ಬಂಧನ - Karnataka Crime News: Latest Crime Headlines | Police Varthe
Thursday, May 6 , 2021 2:40 PM

ಕ್ರೈಂ












ಉಪ್ಪಿನಂಗಡಿ ಎಟಿಎಂ ಮಷಿನ್, ಸಿಸಿಟಿವಿಗಳ ಜಖಂ ಮಾಡಿ ಕಳ್ಳತನಕ್ಕೆ ಯತ್ನ!: ಆರೋಪಿಯ ಬಂಧನ



282

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ ಮಾಡಿ ಕಳ್ಳತನಕ್ಕೆ ಯತ್ನಿಸಿದ್ದ ಪ್ರಕರಣದ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡಬ ತಾಲ್ಲೂಕಿನ ಸವಣೂರು ಗ್ರಾಮದ ಚಾಪಳ್ಳ ಮಸೀದಿ ಹತ್ತಿರದ ಶಾಂತಿನಗರ ಮಾಂತೇರು ಮನೆ ನಿವಾಸಿ ಮಹಮ್ಮದ್ ಎಂಬವರ ಪುತ್ರ ಸಮೀರ್ ಯಾನೆ ಅಮ್ಮಿ(೨೩) ಎಂದು ಗುರುತಿಸಲಾಗಿದೆ.

ಪ್ರಕರಣ ಸಾರಾಂಶ; ಉಪ್ಪಿನಂಗಡಿ ಠಾಣಾ ವ್ಯಾಪ್ತಿಯ ಉಪ್ಪಿನಂಗಡಿ ಪೇಟೆಯ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯ ಎರಡು ಎಟಿಎಮ್ ಮಷಿನ್ ಹಾಗೂ ರೂಮ್ ನಲ್ಲಿದ್ದ ೩ ಸಿಸಿಟಿವಿ ಕ್ಯಾಮೆರಾಗಳನ್ನು ಆಯುಧದಿಂದ ಜಖಂ ಗೊಳಿಸಿ, ನಂತರ ಕಳ್ಳತನಕ್ಕೆ ಪ್ರಯತ್ನಿಸಿದ್ದರು. ಈ ಕುರಿತು ಇಲ್ಲಿನ ಬ್ಯಾಂಕಿನ ಮ್ಯಾನೇಜರ್ ಶ್ರೀಧರ್‌ರವರು ದೂರು ನೀಡಿದ್ದರು. ತನಿಖೆ ಕೈಗೆತ್ತಿಗೊಂಡ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿದ್ದಾರೆ. ಕಾರ್ಯಚರಣೆಯನ್ನು ಎಸ್ಪಿ ಸೋನಾವಣೆ ರಿಷಿಕೇಶ್ ಐಪಿಎಸ್ ಮತ್ತು ಅಡಿಷನಲ್ ಎಸ್ಪಿ ಭಾಸ್ಕರ ಒಕ್ಕಲಿಗರವರ ಆದೇಶದ ಮೇರೆಗೆ, ಪುತ್ತೂರು ಉಪವಿಭಾಗದ ಡಿವೈಎಸ್ಪಿ ಗಾನ.ಪಿ.ಕುಮಾರ್‌ರವರ ಮಾರ್ಗದರ್ಶನದಲ್ಲಿ, ಪುತ್ತೂರು ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಉಮೇಶ ಉಪ್ಪಳಿಕೆರವರ ನೇತೃತ್ವದಲ್ಲಿಈ ಪ್ರಕರಣವನ್ನು ಪತ್ತೆ ಹಚ್ಚಲು ಉಪ್ಪಿನಂಗಡಿ ಎಸೈ ಕುಮಾರ್.ಸಿ ಕಾಂಬ್ಲೆ, ಪ್ರೊಬೆಷನರಿ ಪಿಎಸ್‌ಐ ಅನಿಲ್ ಕುಮಾರ್.ಡಿ ಸಿಬ್ಬಂದಿಗಳಾದ ಎಎಸ್‌ಐ ಚೋಮ.ಪಿ, ಹರಿಶ್ಚಂದ್ರ, ಜಗದೀಶ.ಎ, ಶಿವರಾಜ್ ಭಾಗವಹಿಸಿದ್ದರು. ಬಂಧಿತ ಆರೋಪಿಯನ್ನು ನ್ಯಾಯಲಯಕ್ಕೆ ಹಾಜರು ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಕ್ಷಣ ಕ್ಷಣದ ಕ್ರೈಮ್ ಸುದ್ದಿಗಾಗಿ POLICEVARTHE.COM ವೆಬ್ ಸೈಟ್ ಕ್ಲಿಕ್ ಮಾಡಿ, ವಿಕ್ಷೀಸಿ

ಆತ್ಮೀಯ Policevarthe.com ಓದುಗರೇ ನಿಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಡೆಯುವ ಅಪರಾಧ( ಕ್ರೈಮ್) ಸುದ್ದಿಗಳನ್ನು ತಕ್ಷಣವೇ ನಮಗೆ ಕಳುಹಿಸಿ, ನಿಮ್ಮ ಸುದ್ದಿಯನ್ನು ನಾವು ಪ್ರಕಟಿಸುತ್ತೇವೆ.

9741089956

Ranjith Madanthyar
Owner & Chief Editor Policevarthe.com Crime Website

More

ಮಂಗಳೂರು: ಕೋವಿಡ್ ಕರ್ಫ್ಯೂ ನಿಯಮ ಉಲ್ಲಂಘಿಸಿ ಬೀಚ್ ಹೌಸ್​ನಲ್ಲಿ ಮದುವೆ ಪಾರ್ಟಿ ನಡೆಸಿದ...

ಮಂಗಳೂರು; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಎಟಿಎಂ ಮಷಿನ್, ಸಿಸಿಟಿವಿಗಳನ್ನು ಜಖಂ...


ಮಂಗಳೂರು: ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿ ಹಾಗೂ ಮಂಗಳೂರು ಪೂರ್ವ ಪೊಲೀಸ್...

ಮಂಗಳೂರು:  ದ್ವಿತೀಯ ಪಿಯುಸಿಯ ವಿದ್ಯಾರ್ಥಿಗಳನ್ನು ಇರಿಸಿ ಸರ್ಕಾರದ ನಿಯಮ‌ ಉಲ್ಲಂಘನೆ ಮಾಡಿದ...


ಮಂಗಳೂರು: ಇಲ್ಲಿನ ಜಿಲ್ಲಾ ಕಾರಾಗೃಹದ ಸಹಾಯಕ ಅಧೀಕ್ಷಕರಾದ ಚಂದನ್ ಪಟೇಲ್ ಮತ್ತೆ...

ಮಂಗಳೂರು: ನಗರದ ಇಂಡಿಯಾನ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ...


ಮಂಗಳೂರು: ನಗರದ ಪಂಪ್ ವೆಲ್ ಫ್ಲೈಓವರ್ ಗೋಡೆಯ ಮೇಲೆ ಸೇರಿದಂತೆ ನಗರದ...

ಮಂಗಳೂರು; ಜಿಲ್ಲೆಯ ಉಪ್ಪಿನಂಗಡಿ ಪೇಟೆಯಲ್ಲಿರುವ ಎಸ್‌ಬಿಐ ಎಟಿಎಂ ಕಳ್ಳತನಕ್ಕೆ ಯತ್ನಿಸಿದ್ದಾರೆ. ಇಂದು...


Editor in Chief - Ranjith Madanthyar
PoliceVarthe.Com , Crime News website Karnataka. Copyright 2020 poicevarthe.com | All Right Reserved
error: Content is protected !!